ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸನ್ನದ್ಧ : ಸಾಲಿಮಠ

ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸನ್ನದ್ಧ : ಸಾಲಿಮಠ

ಶಿರಹಟ್ಟಿ : ಕೋವಿಡ್-19 ಹಿನ್ನಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಮಾನ್ಯ ಉಚ್ಚ ನ್ಯಾಯಾಲಯದ ಆದೇಶದ ಪ್ರಕಾರ ಪ್ರತಿ ಪರೀಕ್ಷಾ ಕೇಂದ್ರದಲ್ಲಿ “ಪ್ರಾಮಾಣಿತ ಕಾರ್ಯಾಚರಣಾ ವಿಧಾನ(ಎಸ್.ಓ.ಪಿ) ಮಾರ್ಗಸೂಚಿಗಳನ್ನು ಅಳವಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ ವಿ. ಸಾಲಿಮಠ ಹೇಳಿದರು.

ಅವರು ಪಟ್ಟಣದ ತಾಲೂಕ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ ಅವರ ಅಧ್ಯಕ್ಷತೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ತಾಲೂಕಿನ ಒಟ್ಟು 52 ಪ್ರೌಢ ಶಾಲೆಗಳಲ್ಲಿ 2709 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದಾರೆ. ಇವರ ಜೊತೆಗೆ ಬೇರೆಡೆಗೆ ವ್ಯಾಸಂಗ ಮಾಡುತ್ತಿದ್ದ 105 ವಿದ್ಯಾರ್ಥಿಗಳು ಶಿರಹಟ್ಟಿ ತಾಲೂಕಿನಲ್ಲಿ ಪರೀಕ್ಷೆ ಬರೆಯಲು ನೋಂದಾಯಿಸಿದ್ದಾರೆ ಮತ್ತು ಇಲ್ಲಿ ವ್ಯಾಸಂಗ ಮಾಡುವ 39 ವಿದ್ಯಾರ್ಥಿಗಳು ತಾಲೂಕಿನಿಂದ ಬೇರೆ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ, ಸಮಾಜ ಕಲ್ಯಾಣ ಇಲಾಖೆಯ ಸಹನಿರ್ದೇಶಕ ಎಸ್.ಬಿ.ಹರ್ತಿ, ಪಿ.ಎಸ್.ಐ ಸುನೀಲ ನಾಯಕ, ತಾಲೂಕ ವೈಧ್ಯಾಧಿಕಾರಿ ಸುಭಾಸ ದೈಗೊಂಡ, ಡಿ.ಐ.ಖಮಗಲ್ ಹಾಗೂ ತಾಲೂಕಿನ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

Related