ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ

ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿರುವಂತಹ ವಾಜಪೇಯಿ ಕ್ರೀಡಾಂಗಣದಲ್ಲಿ 27-01-2024 ರಂದು ಕರ್ನಾಟಕ ಸ್ಟೇಟ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಪಂದ್ಯಾವಳಿಗಳನ್ನು ಕರ್ನಾಟಕ ಅಮೆಚರ್ ಬಾಕ್ಸಿಂಗ್ ಅಸೋಸಿಯೇಷನ್ ಸಾರಾಥ್ಯದಲ್ಲಿ ನಡೆಯಲಿದೆ.

ಇನ್ನು ಈ ಪಂದ್ಯಾವಳಿಗಳಲ್ಲಿ ರಾಜ್ಯದಲ್ಲಿರುವ ಸುಮಾರು 200ಕ್ಕೂ ಹೆಚ್ಚು ಕ್ರೀಡಾಪಟುಗಳು ಬಾಗಿಯಾಗಲಿದ್ದಾರೆ ಎಂದು ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷರಾಗಿರುವಂತಹ ರಾಜಕುಮಾರ ಪ್ರಜಾವಾಹಿಗೆ ತಿಳಿಸಿದ್ದಾರೆ.

ಈ ಪಂದ್ಯಾವಳಿಗಳಲ್ಲಿ ವಿಶೇಷವಾಗಿ ಸುಮಾರು 60ಕ್ಕೂ ಹೆಚ್ಚು ಮಹಿಳಾ ಬಾಕ್ಸಿಂಗ್ ಕ್ರೀಡಾಪಟುಗಳು ಭಾಗವಹಿಸಲಿದ್ದು, ಈ ಪಂದ್ಯಾವಳಿಯಲ್ಲಿ ಗೆದ್ದವರಿಗೆ ರಾಷ್ಟ್ರಮಟ್ಟದಲ್ಲಿ ಹಾಗೂ ಒಲಂಪಿಕ್ ಕ್ರೀಡಾಂಗಣದಲ್ಲಿ ಅವಕಾಶ ಸಿಗಲಿದೆ ಎಂದು ನಿರ್ವಾಹಕರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ಶನಿವಾರ ಬೆಳಗ್ಗೆ 9 ಸಾರಿಗೆ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ, ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ, ಕೇಂದ್ರ ಸಚಿವರಾಗಿರುವಂತಹ ನಾರಾಯಣಸ್ವಾಮಿ ಹಾಗೂ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇನ್ನಿತರರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Related