ರಾಜ್ಯದ ‘ಜನರೇ ಹುಷಾರ್’..!

ರಾಜ್ಯದ ‘ಜನರೇ ಹುಷಾರ್’..!

ಬಾಗಲಕೋಟೆ : ವರ್ಷಾಚರಣೆ ಸಂದರ್ಭದಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ವಾಹನ ಜಪ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ನವನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಸ್ಥಾಪಿಸಲಾದ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಮಾದ್ಯಮದವರಿಗೆ ಈ ವಿಷಯ ತಿಳಿಸಿದ ಅವರು ಗ್ರಾ.ಪಂ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ವಿಜಯೋತ್ಸವ ಅಚರಿಸುವ ಹಿನ್ನಲೆಯಲ್ಲಿ ಡಿ.31 ರಂದು ರಾತ್ರಿ 12 ಗಂಟೆ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿತ್ತು,

ಆದರೆ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸುವದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದು, ಅದನ್ನು ತಡೆಯಲು ಡ್ರಿಂಕ್ & ಡ್ರೈವ್ ಮಾಡಿದಲ್ಲಿ ವಾಹನ ಜಪ್ತ ಮಾಡಲಾಗುತ್ತಿದೆ ಎಂದು ತಿಳಿಸಿದರು.

Related