ಬಿ ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬಿ ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರು ಕಣಕ್ಕೆ ಇಳಿದಿದ್ದಾರೆ.

ಇಂದು ಗುರುವಾರ ಏಪ್ರಿಲ್ 18ರಂದು ಶಿವಮೊಗ್ಗದಲ್ಲಿರುವ ಡಿಸಿ ಕಚೇರಿಗೆ ಭೇಟಿ ನೀಡಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿರುವ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್, ಬಿಜೆಪಿ ಅಭ್ಯರ್ಥಿಯಾಗಿ ಬಿ ವೈ ರಾಘವೇಂದ್ರ ಅವರು ಚುನಾವಣೆ ಕಣದಲ್ಲಿದ್ದು ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ಇನ್ನು ಈ ಕ್ಷೇತ್ರದಲ್ಲಿ ಮತದಾರರು ಯಾರ ಕೈಹಿಡಿಯುತ್ತಾರೆ ಎಂಬ ಕಾತುರ ರಾಜ್ಯ ರಾಜಕೀಯದಲ್ಲಿ ಮನೆ ಮಾಡಿದೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ. ಅವರೊಂದಿಗೆ ಶಿವಮೊಗ್ಗ ಶಾಸಕ ಚನ್ನಬಸ್ಸಪ್ಪ ಮತ್ತು ಮಾಜಿ ಶಾಸಕ ಹಾಗೂ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಗೀತಾ ಶಿವರಾಜಕುಮಾರ್ ಸಹೋದರ ಕುಮಾರ್ ಬಂಗಾರಪ್ಪ ಸಹ ಇದ್ದಾರೆ.

Related