ಸುದೀಪ್, ಇಂದ್ರಜಿತ್ ಸಿದ್ದಗಂಗಾ ಮಠಕ್ಕೆ ದಿಢೀರ್ ಭೇಟಿ

ಸುದೀಪ್, ಇಂದ್ರಜಿತ್ ಸಿದ್ದಗಂಗಾ ಮಠಕ್ಕೆ ದಿಢೀರ್ ಭೇಟಿ

ತುಮಕೂರು : ಸ್ಯಾಂಡಲ್‌ವುಡ್ ನಾಳೆ ನಟ ಸುದೀಪ್ ಹುಟ್ಟುಹಬ್ಬವಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿದ್ದಗಂಗಾ ಮಠಕ್ಕೆ ಸುದೀಪ್ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನ ಪಡೆದುಕೊಂಡರು.

ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸುದೀಪ್ ತೀರ್ಮಾನಿಸಿದ್ದಾರೆ. ಹೀಗಾಗಿ ಮಠಕ್ಕೆ ಭೇಟಿ ಕೊಟ್ಟು ಗದ್ದುಗೆ ದರ್ಶನ ಪಡೆದರು. ಸುದೀಪ್ ಜೊತೆ ನಿರ್ದೇಶಕ ಇಂದ್ರಜೀತ್ ಲಂಕೇಶ್ ಕೂಡ ಮಠಕ್ಕೆ ಭೇಟಿ ಕೊಟ್ಟು ಗದ್ದುಗೆಗೆ ಪೂಜೆ, ಕುಂಕುಮಾರ್ಚನೆ ಮಾಡಿ ದರ್ಶನ ಪಡೆದುಕೊಂಡರು.

ಈ ವರ್ಷ ಪರಿಸ್ಥಿತಿ ಸರಿಯಿಲ್ಲ. ಆದ್ದರಿಂದ ಈ ಬಾರಿ ಹುಟ್ಟುಹಬ್ಬವನ್ನು ನಿಮ್ಮ ಜೊತೆ ಆಚರಣೆ ಮಾಡುತ್ತಿಲ್ಲ ಎಂದಿರುವ ಸುದೀಪ್, ನಿಮ್ಮ ಶುಭಾಶಯಗಳು ನನಗೆ ಮುಖ್ಯ ಹಾಗೂ ನಾನೇ ಹೇಳಿದಂತೆ, ನಿಮ್ಮನ್ನು ಕಾಣುವ ಸಂತೋಷವನ್ನು ಬೇರೆ ಯಾವುದೂ ನನಗೆ ನೀಡುವುದಿಲ್ಲ.

ಯಾವುದೇ ಸಂಭ್ರಮಾಚರಣೆ ಹಾಗೂ ಕಾರ್ಯಕ್ರಮಗಳು ಬೇಡ. ಸಾಧ್ಯವಾದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದ ಕೆಲವರಿಗೆ ಯಾವುದಾದರೂ ರೀತಿ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡರು

ಮಠಕ್ಕೆ ಭೇಟಿ ಕೊಟ್ಟು ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡ ಕಿಚ್ಚ ಸುದೀಪ್ ಹಾಗೂ ಇಂದ್ರಜಿತ್ ಲಂಕೇಶ್ ಗೆ ಅರ್ಚಕರು ಶಿವಕುಮಾರ ಶ್ರೀಗಳ ಭಾವಚಿತ್ರವನ್ನು ಕಾಣಿಕೆಯಾಗಿ ಕೊಟ್ಟು ಸನ್ಮಾನಿಸಿದರು.

Related