ಅಂಗನವಾಡಿ ಕೇಂದ್ರ ತೆರೆಯಲು ಸುಪ್ರೀಂ ಕೋರ್ಟ್ ಆದೇಶ

ಅಂಗನವಾಡಿ ಕೇಂದ್ರ ತೆರೆಯಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ : ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜ. 31ರ ಹೊತ್ತಿಗೆ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ಸ್ಥಗಿತಗೊಂಡ ಅಂಗನವಾಡಿಗಳ ಕಾರ್ಯನಿರ್ವಹಣೆ ಇನ್ನೂ  ಆರಂಭಗೊಂಡಿಲ್ಲ.  ಈ ತಿಂಗಳ ಆರಂಭದಲ್ಲಿ ಶಾಲಾ ಕಾಲೇಜುಗಳು ಬಹುತೇಕ ಆರಂಭಗೊಂಡಿದೆ.

6 ವರ್ಷದ ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ಇರುವ ಅಂಗನವಾಡಿ ಕೇಂದ್ರಗಳನ್ನು ಮತ್ತೆ ಆರಂಭಿಸಿ ಮಕ್ಕಳನ್ನು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಮಾನ.

ಇದೇ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿಯರಿಗೆ, ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿರುವ ತಾಯಿ-ಮಗುವಿಗೆ ಪೂರಕ ಆಹಾರವನ್ನು ಒದಗಿಸುವಂತೆ ಕೂಡ ಸುಪ್ರೀಂ ಕೋರ್ಟ್ ಸೂಚಿಸಿದೆ.

Related