ಸಿಎಂ, ಡಿಸಿಎಂ ಬಣ ನಡುವೆ ಹೊತ್ತಿಕೊಂಡಿರುವ ಬೆಂಕಿಗೆ ತುಪ್ಪ ಸುರಿದ್ರಾ ಖರ್ಗೆ?

ಸಿಎಂ, ಡಿಸಿಎಂ ಬಣ ನಡುವೆ ಹೊತ್ತಿಕೊಂಡಿರುವ ಬೆಂಕಿಗೆ ತುಪ್ಪ ಸುರಿದ್ರಾ ಖರ್ಗೆ?

ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತಗಳಿಂದ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ.

ಹೌದು, ಕಾಂಗ್ರೆಸ್ ಪಕ್ಷವು 135 ಸೀಟುಗಳನ್ನು ಪಡೆದು ಅಧಿಕಾರಕ್ಕೇರಿದೆ. ಆದರೆ ಚುನಾವಣೆ ಮುಗಿದ ನಂತರ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ನಡುವೆ ಸಿಎಂ ಕುರ್ಚಿಗೆ ಗುದ್ದಾಟ ನಡೆದಿತ್ತು. ಆದರೆ ಹೈಕಮಾಂಡ್ ತೀರ್ಮಾನದ ಮೇಲೆ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಮತ್ತೆ ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿಗೆ ಗುದ್ದಾಟ ನಡೆಯುತ್ತಿದೆ ಎಂದು ತಿಳಿದು ಬರುತ್ತಿದೆ.

ಇನ್ನು 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಸಿದ್ದರಾಮಯ್ಯ ಬೆಂಬಲಿಗರು ಹೇಳುತ್ತಿದ್ದರೆ, ಮತ್ತೊಂದೆಡೆ ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದು ಡಿಕೆಶಿ ಬೆಂಬಲಿಗರು ಕೂಗೆಬ್ಬಿಸಿದ್ದಾರೆ. ಇದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಸ್ಫೋಟಕ ತಿರುವು ಪಡೆದುಕೊಂಡಿದೆ. ಹೈಕಮಾಂಡ್ ಎಚ್ಚರಿಕೆ ಹೊರತಾಗಿಯೂ ಡಿಕೆ ಬಣದ ಶಾಸಕರು ಮಾತು ನಿಲ್ಲಿಸುತ್ತಿಲ್ಲ. ಇದೀಗ ಪ್ರಿಯಾಂಕ್ ಖರ್ಗೆ ಅವರು ಹೇಳಿಕೆ ನೀಡಿದ್ದು, ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ನಾನೂ ಸಿದ್ಧ ಎಂದಿದ್ದಾರೆ. ಇದರೊಂದಿಗೆ ಸಿಎಂ, ಡಿಸಿಎಂ ಬಣ ನಡುವೆ ಹೊತ್ತಿಕೊಂಡಿರುವ ಬೆಂಕಿಗೆ ಪ್ರಿಯಾಂಕ್ ಖರ್ಗೆ ತುಪ್ಪ ಸುರಿದಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ನಡುವೆ ಅಧಿಕಾರಿ ಹಂಚಿಕೆ ಬಗ್ಗೆ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದು ಮತ್ತೊಂದು ಹೆಜ್ಜೆ ಮುಂದೆ ಹೋಗುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಎಐಸಿಸಿ ನಾಯಕರಾದ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮೊನ್ನೇ ರಾತ್ರೋರಾತ್ರಿ ಬೆಂಗಳೂರಿಗೆ ದೌಡಾಯಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ ಮಾಡಿದ್ದರು. ಅಲ್ಲದೇ ಈ ಬಗ್ಗೆ ಹೇಳಿಕೆ ಕೊಡುವ ಶಾಸಕರು, ಸಚಿವರುಗಳಿಗೆ ಖಡಕ್ ಸೂಚನೆ ನೀಡಿದ್ದರು. ಇದರ ಸಹ ಇಂದು (ನವರಂಬರ್ 03) ಸ್ವತಃ ಎಐಇಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಹೇಳಿಕೆ ಹೇಳಿಕೆ ನೀಡಿದ್ದು, ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ನಾನೂ ಸಿದ್ಧ ಎಂದಿದ್ದಾರೆ. ಇದರೊಂದಿಗೆ ಸಿಎಂ, ಡಿಸಿಎಂ ಬಣ ನಡುವೆ ಹೊತ್ತಿಕೊಂಡಿರುವ ಬೆಂಕಿಗೆ ಪ್ರಿಯಾಂಕ್ ಖರ್ಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ.

 

Related