ಅತ್ಯಾಚಾರ ಆರೋಪಿ ನೇಣಿಗೆ ಶರಣು

ಅತ್ಯಾಚಾರ ಆರೋಪಿ ನೇಣಿಗೆ ಶರಣು

ವಿಜಯಪುರ : 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಬಂಧಿಯಾಗಿದ್ದ ದೇವಿಂದ್ರ ಭೀಮರಾಯ ಸಂಗೋಗಿ ಭಾನುವಾರ ಸಿಂದಗಿ ಪೊಲೀಸ್ ಠಾಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ್, ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹಿನ್ನೆಲೆಯಲ್ಲಿ ಆಕೆಯ ತಂದೆ ನೀಡಿದ ದೂರಿನನ್ವಯ ಆರೋಪಿಯನ್ನು ಪೊಲೀಸರು ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದರು. ಠಾಣೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡಿದ್ದು, ಇದನ್ನು ಗಮನಿಸಿದ ಪೋಲೀಸರು ಕೂಡಲೇ ವಿಜಯಪುರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ. ಇಂತಹ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ. ಈ ಘಟನೆ ಕುರಿತು ಸಿಐಡಿ ತನಿಖೆಗೆ ವಹಿಸುವಂತೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Related