ಸಂಸದರ ಅಮಾನತ್ತು: ಪ್ರಜಾಪ್ರಭುತ್ವದ ಕಗ್ಗೊಲೆ-ಸಿಎಂ

ಸಂಸದರ ಅಮಾನತ್ತು: ಪ್ರಜಾಪ್ರಭುತ್ವದ ಕಗ್ಗೊಲೆ-ಸಿಎಂ

ಮೈಸೂರು: ಸಂಸತ್ತಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನ ಮೈಸೂರು ಪ್ರವಾಸದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ್ನಲ್ಲಿದ್ದು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದರು.

ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು ಪ್ರಭಾಪ್ರಭುತ್ವವನ್ನು ಹಾಗೂ ಜನರ ಭಾವನೆಯನ್ನು ಗೌರವಿಸುತ್ತಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ ಎಂದರು.

 

Related