ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಶ್ರೀಮತಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ

ಎಂ.ಆರ್.ಸೀತಾರಾಮ್ ಹಾಗೂ ಸಮಾಜಸೇವೆ ಹೆಸರಲ್ಲಿ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರಿಗೆ ಸ್ಥಾನ ನೀಡಲಾಗಿದೆ.

ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

Related