ಕೇಂದ್ರ ಸರ್ಕಾರದಿಂದ ಜನಸಾಮಾನ್ಯರಿಗೆ ಸಿಹಿ ಸುದ್ದಿ

ಕೇಂದ್ರ ಸರ್ಕಾರದಿಂದ ಜನಸಾಮಾನ್ಯರಿಗೆ ಸಿಹಿ ಸುದ್ದಿ

ದೆಹಲಿ: ಸತತವಾಗಿ ಅಕ್ಕಿ ಬೆಲೆಯಲ್ಲಿ ಏರಿಕೆ ಯಾಗುತ್ತಿರುವುದರಿಂದ ಸಾಮಾನ್ಯ ಜನರಿಗೆ ಬದುಕೋದೇ ಕಷ್ಟಕರದ ಸಂಗತಿಯಾಗಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರದಿಂದಲೇ ಪ್ರತಿ ಕೆಜಿ ಅಕ್ಕಿಗೆ ಕೇವಲ 29 ರೂಪಾಯಿನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಹೌದು, ಇತ್ತೀಚಿನ ದಿನಗಳಲ್ಲಿ ಅಕ್ಕಿಯ ಬೆಲೆ ಏರಿಕೆ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರಿಗೆ ಉತ್ತಮ ಗುಣಮಟ್ಟದ ಅಕ್ಕಿಯನ್ನು ಕೊಳ್ಳಲು ಆಗುತ್ತಿಲ್ಲ. ಹಾಗಾಗಿ ಕೇಂದ್ರ ಸರ್ಕಾರದಿಂದ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿ ಅಕ್ಕಿ ಕೇವಲ 29 ರೂಪಾಯಿಗೆ ಮಾರಾಟ ಮಾಡಲಾಗುವುದು ಎಂದು ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್‌ ಚೋಪ್ರಾ, ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಶುಕ್ರವಾರ ಹೇಳಿಕೆ ನೀಡುರುವ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್‌ ಚೋಪ್ರಾ, ‘ಕಳೆದೊಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದೆ. ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ವಾರದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವೇ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 29 ರು.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ’ ಎಂದು ತಿಳಿಸಿದ್ದಾರೆ.

 

Related