ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸ್ವೀಟಿ ತಮ್ಮ

ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸ್ವೀಟಿ ತಮ್ಮ

ಬೆಂಗಳೂರು: ಕರುನಾಡ ಮಂದಿಯ ಮನಸ್ಸು ಕದ್ದ ಕನ್ನಡ ಚಿತ್ರರಂಗದ ಸ್ವೀಟಿ ಎಂದು ಖ್ಯಾತಿ ಹೊಂದಿರುವ ನಟಿ ರಾಧಿಕಾ ಕುಮಾರಸ್ವಾಮಿ ಅವರು ಹಲವಾರು ಚಿತ್ರಗಳಲ್ಲಿ ನಟಿಸಿ ಶಭಾಷ್ ಗಿರಿಯನ್ನು ಪಡೆದುಕೊಂಡಿದ್ದಾರೆ. ರಾಧಿಕಾ ಅವರು ಬರಿ ನಟನೆಯ ಅಲ್ಲದೆ ಅವರು ಸಿನಿಮಾಗಳ ನಿರ್ಮಾಣ ಸಹ ಮಾಡಿದ್ದಾರೆ. ಇದೀಗ ಅವರ ತಮ್ಮನಾದಂತಹ ರವಿರಾಜ್ ಅವರು ಸಹ ಚಂದನವನಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಹೌದು ನಟಿ ಕುಮಾರಸ್ವಾಮಿ ತಮ್ಮ ರವಿರಾಜ್ ಅವರು ನಿರ್ಮಾಪಕರಾಗಿ ಸ್ಯಾಂಡಲ್ವುಡ್ ಗೆ ಕಾಲಿಟ್ಟಿದ್ದಾರೆ.

ರವಿರಾಜ್ ಅವರಿಗೆ ಸಿನಿಮಾರಂಗ ಹೊಸದೇನಲ್ಲ. ತನ್ನ ಸಹೋದರಿ ರಾಧಿಕಾ ಅವರ ಶಮಿಕಾ ಎಂಟರ್ ಪ್ರೈಸಸ್ ನಲ್ಲಿ ಸಹ ನಿರ್ಮಾಪಕನಾಗಿ ಕೆಲಸ ಮಾಡಿರುವ ಅನುಭವ ರವಿರಾಜ್ ಅವರಿಗಿದೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ರವಿರಾಜ್ ತಂಗಿ ರಾಧಿಕಾ ಜೊತೆ ಕೆಲಸ ಮಾಡಿದ್ದರು. ಜೊತೆಗೆ ಸಿನಿಮಾ ವಿತರಣೆ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ಆದರೀಗ ಸ್ವತಂತ್ರ ನಿರ್ಮಾಪಕರಾಗಿ ಚಂದನವನಕ್ಕೆ ಪದಾರ್ಪಣೆ ಮಾಡತ್ತಿದ್ದಾರೆ ರವಿರಾಜ್.

ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದು ಈಗಾಗಲೇ ಮೊದಲ ಸಿನಿಮಾದ ಚಿತ್ರೀಕರಣ ಕೂಡ ಮುಗಿಸಿದ್ದಾರೆ. ರವಿರಾಜ್ ತಮ್ಮ ನಿರ್ಮಾಣ ಸಂಸ್ಥೆಗೆ ‘ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂದು ಹೆಸರಿಟ್ಟಿದ್ದಾರೆ. ಅಂದಹಾಗೆ ಇದು ರವಿರಾಜ್ ಅವರ ತಂದೆಯ ಕನಸಿನ ಬ್ಯಾನರ್. ಅಪ್ಪನ ಕನಸನ್ನು ‘ಶ್ರೀ ದುರ್ಗಾಪರಮೇಶ್ವರಿ’ ಬ್ಯಾನರ್ ಮೂಲಕ ನನಸು ಮಾಡಿದ್ದಾರೆ. ತಮ್ಮ ಬ್ಯಾನರ್‌ನ ಮೊದಲ ಸಿನಿಮಾವಾಗಿ ಹಾರರ್ ಚಿತ್ರ ತಯಾರಾಗಿದ್ದು ರಿಲೀಸ್‌ಗೆ ರೆಡಿಯಾಗಿದೆ. ಇದುವರೆಗೂ ನೋಡಿರದ ಹಾರರ್ ಸಬ್ಜೆಕ್ಟ್ ಮೂಲಕ ಅಭಿಮಾನಿಗಳನ್ನು ಭಯ ಬೀಳಿಸಲು ಸಜ್ಜಾಗಿದ್ದಾರೆ ರವಿರಾಜ್ ಮತ್ತು ತಂಡ.

 

Related