ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ಕೊಪ್ಪಳ: ಜಿಲ್ಲೆಯಾದ್ಯಂತ ಕೊರೋನಾ ವೈರಸ್ ಹಾವಳಿ ಭೀಕರವಾಗಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ಇದರ ಜೊತೆಗೆ ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ.

ಗಂಗಾವತಿಯಲ್ಲಿ ಕೊರೋನ ಹಾವಳಿ ನಿಯಂತ್ರಣಕ್ಕೆ ಸಿಗುತ್ತಿಲ್ಲ, ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಕೊಂಡು, ಕೊರೋನ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಕರವೇ ಪ್ರವೀಣ್ ಶೆಟ್ಟಿ ಬಣ ಜಿಲ್ಲಾಧ್ಯಕ್ಷರಾದ ಪಂಪಣ್ಣ ನಾಯಕ ಆಗ್ರಹಿಸಿದರು.

ಕೊರೋನ ನಿಯಂತ್ರಣ ಕೈತಪ್ಪಿದ್ದು, ಯುವಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಕೊರೋನ ಭೀಕರತೆ ಬಗ್ಗೆ ಎಚ್ಚೆತ್ತುಕೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದು, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದು, ಇದರಿಂದ ಕೊರೋನಾ ಹೆಮ್ಮಾರಿ ಅತಿ ವೇಗವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿರು ವುದರಿಂದ ಜನರಲ್ಲಿ ಆತಂಕ ಮನೆಮಾಡಿದೆ, ಕಾರಣ ಜಿಲ್ಲಾಡಳಿತ ಜಿಲ್ಲೆಯಲ್ಲಿ ಮತ್ತು ವಿಶೇಷವಾಗಿ ಗಂಗಾವತಿಯಲ್ಲಿ ವ್ಯವಹಾರದ ಸಮಯವನ್ನು ನಿಗದಿಪಡಿಸಿ, ದಿನದಲ್ಲಿ ಕನಿಷ್ಠ ನಾಲ್ಕು ತಾಸುಗಳ ಅವಧಿಯನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಆದೇಶ ಹೊರಡಿಸಬೇಕು ಎಂದು ಕರವೇ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

Related