ಅದ್ಯಾವ ಶಿಸ್ತು ಕ್ರಮ ಬೇಕೋ ತೆಗೆದುಕೊಳ್ಳಿ: ಈಶ್ವರಪ್ಪ

ಅದ್ಯಾವ ಶಿಸ್ತು ಕ್ರಮ ಬೇಕೋ ತೆಗೆದುಕೊಳ್ಳಿ: ಈಶ್ವರಪ್ಪ

ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆಎಸ್ ಈಶ್ವರಪ್ಪ ಅವರು ಕಣಕ್ಕಿಳಿದಿದ್ದಾರೆ.

ಇನ್ನು ಈಶ್ವರಪ್ಪ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಹೇಳಿಕೆಗೆ ಈಶ್ವರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಬಿಜೆಪಿ ಪಕ್ಷದಿಂದ ಗುರುತಿಸಿಕೊಂಡಿಲ್ಲ. ಬಂಡಾಯ ಅಭ್ಯರ್ಥಿಯಾಗಿ ಈ ಬಾರಿ ಗುರುತಿಸಿಕೊಳ್ಳಲು ಲೋಕಸಭಾ ಚುನಾವಣೆಯ ಕಣಕ್ಕಿಳಿದಿದ್ದೇನೆ ಎಂದು ವಿಜಯೇಂದ್ರ ಅವರಿಗೆ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವಾಗ ಆತ (ವಿಜಯೇಂದ್ರ) ನನ್ನ ವಿರುದ್ಧ ಏನು ಶಿಸ್ತು ಕ್ರಮ ಕೈಗೊಳ್ಳುತ್ತಾರೆ? ನಾನು ಪಕ್ಷದಿಂದ ಹೊರಬಂದಿದ್ದೇನೆ, ಪಕ್ಷದ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರಗೆ ಪಕ್ಷೇತರವಾಗಿ ಸ್ಪರ್ಧಿಸುವುದು ಎಂದರೇನು ಎಂಬುದೂ ಗೊತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.

ಅದ್ಯಾವ ಶಿಸ್ತು ಕ್ರಮ ಬೇಕೋ ತೆಗೆದುಕೊಳ್ಳಿ, ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ, ನನ್ನ ಉದ್ದೇಶಗಳು ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶಗಳಂತೆಯೇ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ನ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಕುಟುಂಬ ರಾಜಕಾರಣದ ವಿರುದ್ಧ ಹೋರಾಡುತ್ತಿರುವುದಾಗಿ ಹೇಳುತ್ತಾರೆ. ನನ್ನ ಉದ್ದೇಶವೂ ರಾಜ್ಯದಲ್ಲಿ ಬಿಜೆಪಿಯನ್ನು ಅಪ್ಪ ಮಕ್ಕಳ (ಯಡಿಯೂರಪ್ಪ- ಹಾಗು ಪುತ್ರರು) ಹಿಡಿತದಿಂದ ಮುಕ್ತಗೊಳಿಸುವುದಾಗಿದೆ ಎಂದು ಹೇಳಿದ್ದಾರೆ.

Related