ಕೋವಿಡ್ ಗೆ ಬಲಿಯಾದ ತಮಿಳು ನಟ

ಕೋವಿಡ್ ಗೆ ಬಲಿಯಾದ ತಮಿಳು ನಟ

ಚೆನ್ನೈ: ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ ಹೆಚ್ಚಾಗುತ್ತಿರುವುದರಿಂದ ಇತ್ತೀಚಿಗೆ ಕೊರೊನಾ ಸೋಂಕಿನಿಂದ ಮರಣ ಹೊಂದುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಇನ್ನು ಈ ಕೊರೊನ ಸಾಂಕ್ರಾಮಿಕ ವೈರಸ್ಸಿನಿಂದ ಬಳಲುತ್ತಿದ್ದ ತಮಿಳು ಚಿತ್ರರಂಗದ ಹಿರಿಯ ನಟ ಡಿಎಂಡಿಕೆ ನಾಯಕ ವಿಜಯಕಾಂತ್ (71 ವರ್ಷ) ವಿಧಿವಶರಾಗಿದ್ದಾರೆ.

ಕೆಲವು ದಿನಗಳ ಹಿಂದೆ ವಿಜಯಕಾಂತ್ ರವರ ಆರೋಗ್ಯದಲ್ಲಿ ಏರುಪೇರು ಆಗಿತ್ತು ಇದನ್ನು ಕಂಡ ಮನೆಯವರು ಚೆನ್ನೈನ ಮಿಯೋಟ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ವಿಧಿವಶರಾಗಿದ್ದಾರೆ.

ಸೂಮಾರು 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ವಿಜಯಕಾಂತ್ ನಿಧನಕ್ಕೆ ತಮಿಳು ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು, ಅಭಿಮಾನಿಗಳು ಶೋಕ ವ್ಯಕ್ತಪಡಿಸಿದ್ದಾರೆ.

ವಿಜಯಕಾಂತ್ ಅವರು ಕೇವಲ ನಟನೆಯಲ್ಲಿ ಮಾತ್ರವಲ್ಲದೆ ರಾಜಕೀಯರಂಗದಲ್ಲೂ ಕೂಡ ಸಕ್ರಿಯವಾಗಿದ್ದರು. 2011ರಿಂದ 2016ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದರು.

 

Related