ಮಠಾಧೀಶರ ಗೊಡ್ಡು ಬೆದರಿಕೆಗಳಿಗೆ ಬಿಜೆಪಿಯಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ

ಮಠಾಧೀಶರ ಗೊಡ್ಡು ಬೆದರಿಕೆಗಳಿಗೆ ಬಿಜೆಪಿಯಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಹಿರಂಗ ಹೇಳಿಕೆ ಕೊಟ್ಟು ಅವರೇ ಹಾಳಾಗುತ್ತಿದ್ದಾರೆ. ಬಹಿರಂಗ ಹೇಳಿಕೆ ಕೊಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಯತ್ನಾಳಗೆ ಬುದ್ಧಿವಾದ ಹೇಳಿದ್ದಾರೆ.
ಯತ್ನಾಳ ಅವರ ಹೇಳಿಕೆಗಳಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ನನಗೇನು ಅನಿಸುವುದಿಲ, ನಾಲ್ಕು ಗೋಡೆಗಳ ಮಧ್ಯೆ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ತಿಳಿಸಿದರು.
ಮಠಾಧೀಶರ ಗೊಡ್ಡು ಬೆದರಿಕೆಗೆ ಬಿಜೆಪಿಯಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ. ಶಾಸಕರನ್ನು ಮಂತ್ರಿ ಮಾಡಿ ಎಂದು ಮಠಾಧೀಶರು ಹೇಳುವುದು ತಪ್ಪಲ್ಲ. ಶಾಸಕರು ಹೇಳುವುದು ತಪ್ಪು. ನಮ್ಮ ಸಮಾಜದ ವ್ಯಕ್ತಿಗೆ ಮಂತ್ರಿ ಮಾಡದಿದ್ದರೆ ಬಿಜೆಪಿ ಸರ್ವನಾಶ ಅಂತಾ ಹೇಳುವುದು ತಪ್ಪು ಎಂದು ಹೇಳಿದರು. ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಸಿಗಲಿ ಬಿಡಲಿ, ಮುಂಬರುವ ಚುನಾವಣೆಯಲ್ಲಿ ಪೂರ್ಣ ಬಹುಮತದ ಬಿಜೆಪಿ ಸರ್ಕಾರ ತರುವುದೇ ಗುರಿಯಾಗಿದೆ.
ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡುವುದು ಬಿಜೆಪಿ ಸಂಸ್ಕೃತಿ. ಬಿ. ಎಸ್. ಯಡಿಯೂರಪ್ಪ ರಾಜೀನಾಮೆಯಿಂದ ಕಾಂಗ್ರೆಸ್ಸಿನವರು ಖುಷಿಯಲ್ಲಿದ್ದರು. ನಾನೇ ಎಂಎಲ್‌ಎ, ಸಿಎಂ ಎನ್ನುವುದು ಕಾಂಗ್ರೆಸ್ ಸಂಸ್ಕೃತಿ.ನಮ್ಮದಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ವಿಜುಗೌಡ ಪಾಟೀಲ, ಸಾಬು ಮಾಶ್ಯಾಳ, ರಾಜು ಬಿರಾದಾರ, ಚಿದಾನಂದ ಚಲವಾದಿ, ವಿಜಯ ಜೋಶಿ ಮತ್ತಿತರರಿದ್ದರು.

Related