ಸ್ವಯಂ ಪ್ರೇರಿತ ಲಾಕ್ ಡೌನ್ ಗೆ ನಿರ್ಧಾರ

ಸ್ವಯಂ ಪ್ರೇರಿತ ಲಾಕ್ ಡೌನ್ ಗೆ ನಿರ್ಧಾರ

ಗಂಗಾವತಿ : ಕಚೇರಿಯಲ್ಲಿ, ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಶಾಸಕ  ಪರಣ್ಣ ಮುನವಳ್ಳಿ ಮಾತನಾಡಿದರು.

ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ವ್ಯಾಪಾರಸ್ಥರ ಸಹಕಾರ ಮತ್ತು ಸಹಮತದಿಂದ ಮಧ್ಯಾಹ್ನ 4 ಗಂಟೆಯಿಂದ ಲಾಕ್ ಡೌನ್ ಗೆ ನಿರ್ಧರಿಸಲಾಗಿದೆ.

ಜಿಲ್ಲೆಯಲ್ಲಿ ಸೇರಿದಂತೆ ಗಂಗಾವತಿ ನಗರದಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೆ ಕೊರೋನಾ ಪಾಸಿಟಿವ್ ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕುವುದಕ್ಕೆ ಇನ್ನು ಮುಂದೆ ಸ್ವಯಂಪ್ರೇರಿತ ಲಾಕ್ ಡೌನ್ ಗೆ ನಿರ್ಧರಿಸಲಾಗಿದೆ.

Related