ಬೆಂಗಳೂರು: ಅತ್ಯಾಚಾರ ಆರೋಪದಡಿಯಲ್ಲಿ ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ಜೈಲು ಸೆರೆವಾಸ ಅನುಭವಿಸುತ್ತಿದ್ದು, (ಶುಕ್ರವಾಎ ಆ. 01) ಇಂದು ಜನಪ್ರತಿನಿಧಿಗಳ ಕೋರ್ಟ್ ಮಹತ್ವದ ತೀರ್ಪು ನೀಡಲಿದ್ದು ಇಂದಿನ ಕೋರ್ಟ್ ತೀರ್ಪಿನ ಮೇಲೆ ನಿಂತಿದೆ ಪ್ರಜ್ವಲ್ ರೇವಣ್ಣನ ಮುಂದಿನ ಭವಿಷ್ಯ.
ಯೆಸ್…ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ಇಂದು ಪ್ರಕಟವಾಗಲಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟ ಮಾಡಲಿದ್ದಾರೆ. ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯ ನಿರ್ಧರಿಸುವುದರಿಂದ ಈ ತೀರ್ಪು ಭಾರೀ ಮಹತ್ವ ಪಡೆದುಕೊಂಡಿದೆ.
ಒಂದು ವೇಳೆ ಅಪರಾಧಿ ಎಂದು ತೀರ್ಪು ನೀಡಿದರೆ ಬಳಿಕ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುತ್ತೆ. ಶಿಕ್ಷೆಯ ಪ್ರಮಾಣದ ಬಗ್ಗೆ ವಾದ–ಪ್ರತಿವಾದ ನಡೆಯಲಿದೆ. ಗರಿಷ್ಠ ಶಿಕ್ಷೆಯನ್ನು ವಿಧಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ವಾದ ಮಂಡಿಸಲಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ ಮತ್ತೆ ಮುಂದೂಡಿಕೆ
ಕಡಿಮೆ ಶಿಕ್ಷೆ ವಿಧಿಸಬೇಕೆಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಪ್ರತಿವಾದ ಮಂಡಿಸುವ ಸಾಧ್ಯತೆ ಇದೆ. ಪ್ರಜ್ವಲ್ ರೇವಣ್ಣಗೆ 4 ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಪ್ರಜಾಪ್ರತಿನಿಧಿ ಕಾಯಿದೆಯ ಪ್ರಕಾರ, ಅದಾದ 6 ವರ್ಷಗಳವರೆಗೆ ಚುನಾವಣೆಗೆ ಸ್ಪರ್ಧೆ ಮಾಡುವುದಕ್ಕೆ ಬರಲ್ಲ. ಹೀಗಾಗಿ ಕೋರ್ಟ್ ತೀರ್ಪಿನ ಮೇಲೆ ಪ್ರಜ್ವಲ್ ಅವರ ರಾಜಕೀಯ ಭವಿಷ್ಯ ನಿಂತಿದೆ.
