ರಾಜ್ಯದಲ್ಲಿ ಕೊರೊನಾ ತಡೆಗೆ ಆರೋಗ್ಯ ಇಲಾಖೆ ಸಜ್ಜು

ರಾಜ್ಯದಲ್ಲಿ ಕೊರೊನಾ ತಡೆಗೆ ಆರೋಗ್ಯ ಇಲಾಖೆ ಸಜ್ಜು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನಲ್ಲಿ ಹೆಚ್ಚಳ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಹೌದು ನೆರೆರಾಜ ಕೇರಳದಲ್ಲಿ ಕೊರೊನಾ ಸೋಂಕಿನಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಈಗಿನಿಂದಲೇ ಕಟ್ಟೆಚ್ಚರ ವಹಿಸಬೇಕೆಂದು ಆರೋಗ್ಯ ಇಲಾಖೆ ಮುನ್ಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೊನಾ ಮಾರ್ಗಸೂಚಿಯನ್ನು ಎಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ

ಕ್ರಿಸ್ ಮಸ್ ಹಬ್ಬ ಹಾಗೂ ಹೊಸ ವರ್ಷ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಒಂದು ವಾರಗಳ ಪ್ರಕರಣಗಳನ್ನು ಆಧರಿಸಿ ಹಬ್ಬ ಹಾಗೂ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಬೀಳಲಿದೆ. ಭಾರತದಲ್ಲಿ ಕರೊನಾ ವೈರಸ್ ಪ್ರಕರಣ ಮತ್ತೆ ಹೆಚ್ಚಾಗತೊಡಗಿದ್ದು, ಭಾನುವಾರ 335 ಹೊಸ ಪ್ರಕರಣಗಳು ಪತ್ತೆಯಾಗಿದೆ. ಸೋಂಕಿಗೆ ಕೇರಳದಲ್ಲಿ ನಾಲ್ವರು, ಉತ್ತರಪ್ರದೇಶದಲ್ಲಿ ಒಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,701ಕ್ಕೆ ಏರಿಕೆ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕೇರಳದಲ್ಲಿ ಪ್ರಸ್ತುತ 1,324 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ ಎಂಬುದು ಕಳವಳಕಾರಿ ವಿಷಯವಾಗಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದೊಂದು ವಾರದಲ್ಲಿ 81 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಡಿ.12 ರಿಂದ 18ವರೆಗೆ ಕೋವಿಡ್ ಸೋಂಕು ಲಕ್ಷಣ ಹೊಂದಿರುವ 2,619 ಶಂಕಿತರ ಸ್ವಾಯಬ್ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 81 ಜನ ಸೋಂಕಿಗೆ ಒಳಗಾಗಿದ್ದಾರೆ.

 

Related