ಅಕ್ರಮ ಆಸ್ತಿಗಳಿಕೆ ಪ್ರಕರಣ; ಸಿಎಂ ನೆಮ್ಮದಿ!

ಅಕ್ರಮ ಆಸ್ತಿಗಳಿಕೆ ಪ್ರಕರಣ; ಸಿಎಂ ನೆಮ್ಮದಿ!

ಶಿವಮೊಗ್ಗ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರಾಳರಾಗಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬAಧ ಅವರ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳನ್ನು ವಾಪಾಸ್ ಪಡೆದ ನಂತರ ಅವರಿಗೆ ನೆಮ್ಮದಿಯಾಗಿದೆ.

ಶಿವಮೊಗ್ಗ ಮೂಲದ ವಕೀಲರಾದ ಬಿ. ವಿನೋದ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇಂದು ಈ ಸಂಬಂಧ  ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಬೇಕಾಗಿತ್ತು.

ಆದರೆ ದೂರು ದಾಖಲಿಸಿದ್ದ ವಕೀಲ ವಿನೋದ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ಮುಂದೆ ಹಾಜರಾಗಿ ತಾವು ದಾಖಲಿಸಿದ ಮೂರು ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದಾಗಿ ಹೇಳಿದ್ದಾರೆ. ವಕೀಲರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

Related