ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಇಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾಶ್ಮೀರದ ರಜೌರಿ ಜಿಲ್ಲೆಯ ತನ್ಮಾಂಡಿ ಪ್ರದೇಶದಲ್ಲಿ ಉಗ್ರರನ್ನು ಪತ್ತೆ ಮಾಡಿದ್ದ ಸೇನಾಪಡೆ ಆ ಪ್ರದೇಶವನ್ನು ಸುತ್ತುವರೆದಿದೆ. ಸೈನಿಕರ ಆಗಮನದ ಬೆನ್ನಲ್ಲೇ ಭದ್ರತಾ ಪಡೆ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದರು. ಈ ವೇಳೆ ಸೈನಿಕರು ಕೂಡ ಪ್ರತಿದಾಳಿ ನಡೆಸಿ, ನಿನ್ನೆ ರಾತ್ರಿಯಿಂದಲೇ ಗುಂಡಿನ ಚಕಮಕಿ ನಡೆಯುತ್ತಿದ್ದು, 16 ಕಾರ್ಪ್ ಕಾಮಾಂಡೋಗಳು ನಡೆಸಿದ, ಈ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

Related