ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಜಾತಿ ಗಣತಿಯ ಜಟಾಪಟಿ ಜೋರಾಗಿಯೇ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರ ಜಾತಿ ಗಣತಿ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಈಗಾಗಲೇ ವಿರೋಧ ಪಕ್ಷದ ನಾಯಕರು ಆರೋಪ ಮಾಡುತ್ತಿರುವ ಬೆನ್ನಲ್ಲೇ ಇದೀಗ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಮತ್ತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿರಿಕರಿದ್ದಾರೆ.
ನಗರದಲ್ಲಿದ್ದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರಗಳಿಗೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ. ಇದು ಗೊತ್ತಿದ್ರೂ ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದೆ. ಇದನ್ನೂ ಓದಿ:ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಿಹಿ ಸುದ್ದಿ!
ಖರ್ಗೆಯವರೇ ಹೇಳಿದ್ದಾರೆ ಇದು ಔಟ್ಡೇಟೆಡ್ ವರದಿ ಅಂತಾ. ಈಗಲಾದರೂ ರಾಜ್ಯದ ಜಾತಿ ಜನಗಣತಿಗೆ ಇತಿಶ್ರಿ ಹಾಡಲಿ. ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ಸೃಷ್ಟಿಸಲು ಹೊರಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಳಿ ಕಾಂತರಾಜು ವರದಿಯ ಪ್ರತಿಯೇ ಇಲ್ಲ ಎಂದರು.
