ಬೀದಿಗೆ ಬಿದ್ದ ಕಾರ್ಮಿಕರ ಬದುಕು

ಬೀದಿಗೆ ಬಿದ್ದ ಕಾರ್ಮಿಕರ ಬದುಕು

ಬಾಗಲಕೋಟೆ : ಜಿಲ್ಲೆಯ ಡಿಸಿಎಂ ಗೋವಿಂದ ಕಾರಜೋಳ ಕ್ಷೇತ್ರದಲ್ಲಿದರುವ ಏಕೈಕ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಮಿಕರು ಬೀದಿಗೆ ಬಿದ್ದಿದ್ದು, ಜೀವನ ನಿರ್ವಹಣೆ ಕಷ್ಟವಾಗಿದೆ. ನಮಗೆ ನ್ಯಾಯ ಕೊಡಿಸಿ, ಇಲ್ಲವೇ ವಿಷ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಧೋಳ ತಾಲೂಕಿನ ತಿಮ್ಮಾಪುರ ಬಳಿಯ ರನ್ನ ನಗರದಲ್ಲಿರುವ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಒಂದೆಡೆ ಸರ್ಕಾರ ಸಕ್ಕರೆ ಕಾರ್ಖಾನೆ ಲೀಜ್ ಕೊಡಲು ಮುಂದಾಗಿದ್ದರೆ. ಕಾರ್ಮಿಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ.

ಮುಂಚಿತವಾಗಿ ಕಾರ್ಮಿಕರಿಗೆ ಯಾವುದೇ ನೋಟೀಸ್ ನೀಡದೇ ದಿಢೀರ್ ರಾತ್ರೋರಾತ್ರಿ ಜ. 6ರಂದು ಕೆಲಸದಿಂದ ತೆಗೆದು ಹಾಕಿದ್ದೇವೆ ಎಂದು ನೋಟಿಸ್ ಅಂಟಿಸಿದ್ದಾರೆ. ಇದರಿಂದ ಕಂಗಾಲಾಗಿರುವ ಕಾರ್ಮಿಕರು ಹೊಟ್ಟೆಚೀಲ ತುಂಬಿಸಿಕೊಳ್ಳಲು ಹೆಣಗುವಂತಾಗಿದೆ.

ದುಷ್ಟ ರಾಜಕಾರಣಿ ಕೈಯಲ್ಲಿ ಸಿಲುಕಿ ಕಾರ್ಖಾನೆ ಹಾಳು ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಮಣ್ಣ ತಳೇವಾಡ, ಡಿಸಿಎಂ ಗೋವಿಂದ ಕಾರಜೋಳ ಆಪ್ತ. ಈ ಹಿಂದೆ ಗೋವಿಂದ ಕಾರಜೋಳ ಈ ಕಾರ್ಖಾನೆ ಅಧ್ಯಕ್ಷರಾಗಿದ್ದರು. ಆ ಬಳಿಕ ರಾಮಣ್ಣ ತಳೇವಾಡ ಸತತ ಇಪ್ಪತ್ತು ವರ್ಷಗಳಿಂದ ಅಧ್ಯಕ್ಷರಾಗಿದ್ದಾರೆ. ಆದರೆ ಇದೀಗ ಸಕ್ಕರೆ ಕಾರ್ಖಾನೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಕಾರ್ಖಾನೆ ಲೀಜ್ ನಲ್ಲಿ ಕೊಡುವ ಚರ್ಚೆ ನಡೆಯುತ್ತಿದೆ.

ಕ್ಷೇತ್ರದ ಶಾಸಕ ಡಿಸಿಎಂ ಗೋವಿಂದ ಕಾರಜೋಳ ಭೇಟಿ ಮಾಡಿದ್ರೂ, ಸರ್ಕಾರಕ್ಕೂ ಸಹಕಾರಿ ಸಕ್ಕರೆ ಕಾರ್ಖಾನೆಗೆ ಸಂಬAಧ ಇಲ್ಲದಂತೆ ಮಾತನಾಡಿ, ನಮ್ಮ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ನೊಂದ ಕಾರ್ಮಿಕರಾದ, ನಾಗಪ್ಪ ಕೆಳಗಡೆ, ಪ್ರಕಾಶ್ ಕಬ್ಬೂರ, ಅಳಲು ತೋಡಿಕೊಂಡಿದ್ದಾರೆ.

ಒಂದು  ವೇಳೆ ನಮ್ಮನ್ನ ಮರಳಿ ಕೆಲಸಕ್ಕೆ ತೆಗೆದುಕೊಳ್ಳದಿದ್ದರೆ ಜಿಲ್ಲಾಧಿಕಾರಿ ಕಛೇರಿಗೆ ಕುಟುಂಬ ಸಮೇತರಾಗಿ ಬಂದು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

Related