ಮಂತ್ರಿ ಸ್ಥಾನಕ್ಕೆ ಬೇಡಿಕೆಯಿಟ್ಟ ಶಾಸಕ

ಮಂತ್ರಿ ಸ್ಥಾನಕ್ಕೆ ಬೇಡಿಕೆಯಿಟ್ಟ ಶಾಸಕ

ಮೈಸೂರು : ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರೋಲ್ಲ ಹೇಳಿ, ಸಚಿವ ಸ್ಥಾನ ಕೊಟ್ಟರೆ ಉತ್ತಮವಾದ ಕೆಲಸ ಮಾಡುವೆ. ಆದರೆ, ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್ ಮಹೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿಂದು ಮಾಧ್ಯಮ ಮಿತ್ರರೊಂದಿಗೆ ಮಾತಿಗೆ ಇಳಿದ ಅವರು, ನನಗೆ ಸಚಿವ ಸ್ಥಾನ ಸಿಗುತ್ತೋ ಇಲ್ವೋ ನನಗೆ ಗೊತ್ತಿಲ್ಲ. ಆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದರೆ, ನಾನು ಯಡಿಯೂರಪ್ಪ ಜೊತೆ ಇರುವ ನಿರ್ಧಾರ ಮಾಡಿದ್ದೇನೆ ಎಂದರು.

ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟದ್ದು. ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿ ಮಾಡುವೆ ಎಂದು ಶಾಸಕ ಎನ್ ಮಹೇಶ್ ಅವರು ಪರೋಕ್ಷವಾಗಿ ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟದ್ದಾರೆ.

Related