ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ 3 ದಿನಗಳ ಕಾಲ ಯಲಹಂಕದ ವಾಯುನೆಲೆ ವೈಮಾನಿಕ ಪ್ರದರ್ಶನ ನಡೆಯುತ್ತಿದೆ.

ಏರೋ ಇಂಡಿಯಾ-2021ರ ವೈಮಾನಿಕ ಪ್ರದರ್ಶನಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧಿಕೃತ ಚಾಲನೆ ನೀಡಿದ್ರು. ‘ಆತ್ಮ ನಿರ್ಭರ ಭಾರತ’ ಮತ್ತು ‘ಮೇಕ್ ಇನ್ ಇಂಡಿಯಾ’ ಪರಿಕಲ್ಪನೆಯಡಿ ದೇಶಿ ನಿರ್ಮಿತ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ಗಳು ಆಗಸದಲ್ಲಿ ಅಬ್ಬರಿಸುತ್ತಿವೆ.

ಇನ್ನು ಉದ್ಘಾಟನಾ ಸಮಾರಂಭಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ 3 ರಕ್ಷಣಾ ಪಡೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಏರೋ ಇಂಡಿಯಾದಲ್ಲಿ 78 ವಿದೇಶಿ ಕಂಪನಿಗಳು ಸೇರಿ 600ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿವೆ.

Related