ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿರುವ ಜನರಿಗೆ ಮೋಸವಾಗುತ್ತಿದೆ: ಸಿ.ಟಿ.ರವಿ

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿರುವ ಜನರಿಗೆ ಮೋಸವಾಗುತ್ತಿದೆ: ಸಿ.ಟಿ.ರವಿ

ಕಡೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ ಆರು ತಿಂಗಳು ಕೊಳೆಯುತ್ತ ಬಂದರು ತನ್ನ ಅಭಿವೃದ್ಧಿ ಹಾದಿಯನ್ನು ಕಾಂಗ್ರೆಸ್ ಸರ್ಕಾರ ಹಿಡಿದಿಲ್ಲವೆಂದು ಮಾಜಿ ಸಚಿವ ಸಿ ಟಿ ರವಿ ಆರೋಪ ಮಾಡಿದ್ದಾರೆ.

ಕಡೂರು ಪ್ರವಾಸ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಮತ್ತು ದಲಿತ ವರ್ಗದ ಜನರಿಗೆ ಸತತ ಏಳು ತಿಂಗಳಿಂದ ಅನ್ಯಾಯವಾಗುತ್ತಿದೆ. ದಲಿತರಿಗೆಂದು ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಬೇರೆ ಕೆಲಸಗಳಿಗೆ ಉಪಯೋಗಿಸುತ್ತಿರುವುದು ದಲಿತರಿಗೆ ಮಾಡುತ್ತಿರುವ ಮೋಸ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ಘೋಷಿಸಿದ ಸರ್ಕಾರ ಈಗಾಗಲೇ 1ಸಾವಿರ ಕೋಟಿ ರು. ಬಿಡುಗಡೆ ಮಾಡಿದೆ. ಇದು ಕಾಂಗ್ರೆಸ್ ಪಕ್ಷದ ದಲಿತ ವಿರೋಧಿ ನೀತಿ ತೋರಿಸುತ್ತಿದೆ ಇದಕ್ಕಿಂತ ಸಾಕ್ಷಿ ಬೇಕೆ ಎಂದರು.

ಕಡೂರು ಚಿಕ್ಕಮಗಳೂರು, ತರೀಕೆರೆ, ಮೂಡಿಗೆರೆ ಮತ್ತು ಶೃಂಗೇರಿ ಕ್ಷೇತ್ರಗಳಲ್ಲಿ ಬಿಜೆಪಿ ಸರ್ಕಾರದಲ್ಲಿ ಶಂಕುಸ್ಥಾಪನೆ ಮಾಡಿದ ಕಾರ್ಯಗಳನ್ನು ಕಾಂಗ್ರೆಸ್ ನವರು ಉದ್ಘಾಟನೆ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯ 5 ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹೊಸದಾಗಿ ಜಿಲ್ಲೆಗೆ ಏನನ್ನು ತಂದಿದ್ದೀರಿ ತಿಳಿಸಬೇಕು ಎಂದು ಆಗ್ರಹಿಸಿದರು.

 

Related