ಬಿಜೆಪಿಗೆ ಖಡಕ್ ಎಚ್ಚರಿಕೆ ನೀಡಿದ ಗ್ರಹ ಸಚಿವ

ಬಿಜೆಪಿಗೆ ಖಡಕ್ ಎಚ್ಚರಿಕೆ ನೀಡಿದ ಗ್ರಹ ಸಚಿವ

ಬೆಂಗಳೂರು: ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕರಿಗೆ ಪದೇಪದೇ ತೊಂದರೆ ಕೊಡುತ್ತಿದ್ದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಪ್ರತಿಭಟನೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡಲು ಯತ್ನಿಸಿದವರನ್ನು ಚದುರಿಸಲು ಪೊಲೀಸರು ಲಾಟಿ ಪ್ರಹಾರ ನಡೆಸಬಹುದು ಎಂದು ಗ್ರಹ ಸಚಿವ ಜಿ ಪರಮೇಶ್ವರ್ ಅವರು ಬಿಜೆಪಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಇಂಧನ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಗುರುವಾರ ರಾಜ್ಯದಾದ್ಯಂತ ‘ರಸ್ತಾ ರೋಕೋ’ಪ್ರತಿಭಟನೆ ನಡೆಸಲು ಬಿಜೆಪಿ ತನ್ನ ಯೋಜನೆಯನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದರ್ಶನ್ ತೂಗುದೀಪನ ಭವಿಷ್ಯ ತೂಗುಯ್ಯಾಲೆಯಲ್ಲಿ; ಪೊಲೀಸ್​ ಕಸ್ಟಡಿನಾ? ಜೈಲೇ ಗತಿನಾ?

‘ಬಿಜೆಪಿಯವರು ಪ್ರತಿಭಟನೆ ನಡೆಸಲು ಬಯಸಿದರೆ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಆದರೆ, ಸಾರ್ವಜನಿಕರಿಗೆ ತೊಂದರೆಯಾಗಬಾರದು. ಇದು ಯಾವುದೇ ಸಾರ್ವಜನಿಕ ಅನಾನುಕೂಲತೆಯನ್ನು ಉಂಟುಮಾಡಿದರೆ, ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಪ್ರಹಾರದ ಅಗತ್ಯವಿದ್ದರೂ ಸಹ, ಜನರಿಗೆ ದಾರಿಯನ್ನು ಹೇಗೆ ತೆರವುಗೊಳಿಸಬೇಕೆಂದು ಪೊಲೀಸರಿಗೆ ತಿಳಿದಿದೆ’ ಎಂದು ಪರಮೇಶ್ವರ ಹೇಳಿದರು.

 

Related