ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ಇರುವುದು ನಿಮ್ಮ ಕೈಲಿದೆ: ಮೋದಿ

ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ಇರುವುದು ನಿಮ್ಮ ಕೈಲಿದೆ: ಮೋದಿ

ಅಹಮದಾಬಾದ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ದೇಶದಲ್ಲಿ ಮೂರನೇ ಹಂತದ ಮತದಾನ ನಡೆಯುತ್ತಿದ್ದು ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿಯನ್ನು ಮೂಡಿಸಿದ್ದಾರೆ.

ಹೌದು, ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್​ನಲ್ಲಿ ಮತದಾನ ಮಾಡಿದರು. ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ಇರುವುದು ನಿಮ್ಮ ಕೈಲಿದೆ ಎಂದು ಜನರೆಡೆಗೆ ಕೈಬೀಸಿದ್ದಾರೆ. ಲೋಕಸಭೆ ಚುನಾವಣೆಯ 3ನೇ ಹಂತದಲ್ಲಿ, ಸೂರತ್ ಹೊರತುಪಡಿಸಿ ಗುಜರಾತ್‌ನ ಎಲ್ಲಾ 25 ಸ್ಥಾನಗಳಲ್ಲಿ ಮತದಾನ ನಡೆಯುತ್ತಿದೆ.

ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಈಗಾಗಲೇ ಸೂರತ್ ಕ್ಷೇತ್ರದಿಂದ ಅವಿರೋಧವಾಗಿ ಗೆದ್ದಿದ್ದಾರೆ. ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಈ ವೇಳೆ ಪ್ರಧಾನಿ ಮೋದಿ ಜೊತೆಗೆ ಗೃಹ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು.

ಇದನ್ನೂ ಓದಿ: ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ಗ್ಯಾರಂಟಿ: ಲಕ್ಷ್ಮೀ ಹೆಬ್ಬಾಳಕರ್

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿನಗರದಲ್ಲಿರುವ ರಾಜಭವನದಿಂದ ಮತ ಚಲಾಯಿಸಲು ನೇರವಾಗಿ ಅಹಮದಾಬಾದ್‌ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಗೆ ತೆರಳಿದರು. ಇಲ್ಲಿ ಗೃಹ ಸಚಿವ ಮೋದಿ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಇದಾದ ಬಳಿಕ ಮೋದಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು. ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಅಮಿತ್ ಶಾ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

 

Related