ಲಸಿಕೆ ವಿತರಣೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ

ಲಸಿಕೆ ವಿತರಣೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ

ಬೆಳಗಾವಿ : ಅಥಣಿಯ ತಾಲೂಕು ಆಸ್ಪತ್ರೆಯಲ್ಲಿ ಆರಂಭಗೊಂಡಿರುವ ಕೋವಿಡ್-19 ವಿರುದ್ಧದ ಲಸಿಕೆ ಕಾರ್ಯಕ್ರಮಕ್ಕೆ ಎಂ.ಜಿ. ಹಿರೇಮಠ ಜಿಲ್ಲಾಧಿಕಾರಿ ಖುದ್ದಾಗಿ ಪರಿಶೀಲಿಸಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ  (ಭಿಮ್ಸ್) ಹಾಗೂ ಕೆ.ಎಲ್.ಇ. ಆಸ್ಪತ್ರೆ ಸೇರಿದಂತೆ ಒಟ್ಟು ಹದಿಮೂರು ಕಡೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಈಗಾಗಲೇ ಗುರುತಿಸಲಾಗಿರುವ ಆಯ್ದ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ.
ಅಥಣಿ ತಾಲೂಕು ಆಸ್ಪತ್ರೆಯ ಸಿಬ್ಬಂದಿಯೊಬ್ಬರಿಗೆ ಲಸಿಕೆ ಹಾಕುವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಿರೇಮಠ ಅವರು ಚಪ್ಪಾಳೆ ತಟ್ಟುವ ಮೂಲಕ ಲಸಿಕಾಕಾರಣಕ್ಕೆ ಚಾಲನೆ ನೀಡಿ ಸಂತಸ ವ್ಯಕ್ತಪಡಿಸಿದರು.

ಕೋವಿಡ್ ಲಸಿಕೆ ನೀಡುವುದಕ್ಕೆ ಸಂಬಂಧಿಸಿದಂತೆ  ಆರೋಗ್ಯ ಇಲಾಖೆಯು ನೀಡಿರುವ ಸಲಹೆ-ಸೂಚನೆಗಳನ್ನು ಮತ್ತು ಮಾರ್ಗದರ್ಶಿ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸೂಚನೆ ನೀಡಿದರು.

Related