ದುರಂತ ಅಂತ್ಯ ಕಂಡ ಬಾಲ್ಯ ಸ್ನೇಹಿತರು

ದುರಂತ ಅಂತ್ಯ ಕಂಡ ಬಾಲ್ಯ ಸ್ನೇಹಿತರು

ಧಾರವಾಡ : ಹೊರವಲಯದಲ್ಲಿ ಇಟ್ಟಿಗಟ್ಟಿ ಬಳಿ ಟೆಂಪೋ ಟ್ರಾವೆಲರ್ ಹಾಗೂ ಲಾರಿ ನಡುವೆ ಅಪಘಾತ ಶುಕ್ರವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ ಘಟನೆ ನಡೆದಿದೆ.

ಸಂಕ್ರಾಂತಿ  ಮಾರನೇ ದಿನವೇ ಧಾರವಾಡ ಬಳಿ ಭೀಕರ ಅಪಘಾತ ಸಂಭವಿಸಿದ್ದು, ದಾವಣಗೆರೆಯ ಕೆಲವು ವೈದ್ಯಕೀಯ ವೃತ್ತಿಪರರ ಕುಟುಂಬಗಳು ತೀವ್ರ ಆಘಾತಕ್ಕೊಳಗಾಗಿವೆ.

ಮೃತರೆಲ್ಲರೂ ದಾವಣಗೆರೆ ಮೂಲದವರಾಗಿದ್ದು, ಬಹುತೇಕರು ವೈದ್ಯಕೀಯ ವೃತ್ತಿಯಲ್ಲಿದ್ದರು ಮತ್ತು ಇವರೆಲ್ಲರೂ ಶಾಲಾ ಸ್ನೇಹಿತರಾಗಿದ್ದು, ದಾವಣಗೆರೆಯಿಂದ ಗೋವಾಕ್ಕೆ ಪ್ರವಾಸ ಹೊರಟ್ಟಿದ್ದರು.

ಮೃತ 10 ಮಹಿಳೆಯರ ಪೈಕಿ ನಾಲ್ವರು ವೈದ್ಯರಾಗಿದ್ದರೆ, ಇತರರು ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಮೃತರು ಶಾಲಾ ಸ್ನೇಹಿತರಾಗಿದ್ದು, ಗೋವಾಕ್ಕೆ ಟ್ರಿಪ್ ಹೊರಟ್ಟಿದ್ದರು.
ನಾವು ಧಾರವಾಡದ ಬೃಂದಾವನ್ ಹೋಟೆಲ್‌ನಲ್ಲಿ ಗೋವಾಗೆ ತೆರಳುತ್ತಿದ್ದ ತಂಡದ ಸದಸ್ಯರಿಗೆ ಉಪಾಹಾರ ವ್ಯವಸ್ಥೆ ಮಾಡಿದ್ದೆವು. ಆದರೆ ನಾವು ಆಘಾತಕ್ಕೊಳಗಾಗಿದ್ದೇವೆ. ಮೃತರು ಶಾಲಾ ಸಮಯದಿಂದಲೂ ಉತ್ತಮ ಸ್ನೇಹಿತರಾಗಿದ್ದರು ಮತ್ತು ನಮ್ಮನ್ನು ಭೇಟಿಯಾಗಲು ಉತ್ಸುಕರಾಗಿದ್ದರು ಎಂದು ಧಾರವಾಡದ ಕುಟುಂಬದ ಸ್ನೇಹಿತರೊಬ್ಬರು ಹೇಳಿದ್ದಾರೆ.

ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಪಣಜಿಗೆ ತೆರಳುತ್ತಿದ್ದು, ಲಾರಿ ಬೆಳಗಾವಿಯಿಂದ ಬರುತ್ತಿದ್ದಾಗ ಈ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಟೆಂಪೋ ಟ್ರಾವೆಲರ್ನಲ್ಲಿದ್ದ ಕನಷ್ಠ 11 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಎಸ್ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಘಟನೆಗೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related