ಮೋದಿ ಸರಿಗಟ್ಟುವ ನಾಯಕರು ಇಂಡಿಯಾ ಮೈತ್ರಿಕೂಟದಲ್ಲೂ ಇಲ್ಲ: ಜಿ.ಟಿ.ದೇವೇಗೌಡ

ಮೋದಿ ಸರಿಗಟ್ಟುವ ನಾಯಕರು ಇಂಡಿಯಾ ಮೈತ್ರಿಕೂಟದಲ್ಲೂ ಇಲ್ಲ: ಜಿ.ಟಿ.ದೇವೇಗೌಡ

ಮೈಸೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ಸೇರಿದಂತೆ ಇನ್ನಿತರ ಪಕ್ಷಗಳು ಸಹ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದೇವೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಬಿಜೆಪಿ ಪಕ್ಷವನ್ನು ಸೋಲಿಸಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಮತ್ತು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

ಪ್ರಧಾನಿ ಹುದ್ದೆಗೆ ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಬೇಕೆಂದು ಎಲ್ಲಾ  ರೀತಿಯ ರಾಜಕೀಯ ಚರ್ಚೆ ನಡೆಯುತ್ತಿದೆ. ಆದರೆ ಇದರ ಬೆನ್ನಲ್ಲೇ ಮೋದಿಯವರನ್ನು ಸರಿಗಟ್ಟುವ ನಾಯಕ ನಮ್ಮ ಭಾರತದಲ್ಲಿ ಇಲ್ಲ. ಇನ್ನು ಮಲ್ಲಿಕಾರ್ಜುನ ಅವರಿಗೂ ಕೂಡ ಮೋದಿಯವರನ್ನು ಸರಿಗಟ್ಟಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿಯ ಅಧ್ಯಕ್ಷ ಜಿಟಿ ದೇವೇಗೌಡ ಅವರು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರಿಗಟ್ಟುವ ನಾಯಕರು ಇಂಡಿಯಾ ಮೈತ್ರಿಕೂಟದಲ್ಲೂ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಕೂಡ ನರೇಂದ್ರ ಮೋದಿ ಅವರನ್ನು ಸರಿಗಟ್ಟುವ ನಾಯಕರಲ್ಲ ಎಂದು ಹೇಳಿದರು.

ಸದ್ಯದ ಮಟ್ಟಿಗೆ ದೇಶದಲ್ಲಿ ನರೇಂದ್ರ ಮೋದಿ ಅವರನ್ನು ಸರಿಗಟ್ಟುವ ನಾಯಕ ಬೇರೆ ಯಾರು ಇಲ್ಲ. ದೇಶದ ಪ್ರಧಾನಿ ಆಗುವ ಅರ್ಹತೆ, ಜನ ಬೆಂಬಲ ಮೋದಿ ಅವರನ್ನು ಬಿಟ್ಟರೆ ಬೇರೆ ಯಾರಿಗೂ ಇಲ್ಲ. 21ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿ ಮೋದಿ ಅವರಿಂದ ಮಾತ್ರ ಸಾಧ್ಯ ಎಂದು ಕೊಂಡಾಡಿದರು.

 

Related