ಶಾಲಾ ತರಗತಿ ಪ್ರಾರಂಭ ಇಲ್ಲ

ಶಾಲಾ ತರಗತಿ ಪ್ರಾರಂಭ ಇಲ್ಲ

ಮೈಸೂರು : ಶಾಲೆ ಆರಂಭದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸೆ. 21 ರಂದು ಶಾಲೆ ತರಗತಿ ಆರಂಭ ಇಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಸೆ. 21 ರಿಂದ ಶಾಲೆ ಆರಂಭವಾಗಲಿದ್ದು, ತರಗತಿ ಆರಂಭ ಆಗಲ್ಲ. ಸೆ. 21 ರಿಂದ ಕೇವಲ ಶಾಲೆ ತೆರೆಯಲಿದ್ದು, ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಸೆ. 30 ರೊಳಗೆ ಪ್ರವೇಶಾತಿ ಪ್ರಕ್ರಿಯೆ ಮುಗಿಸಬೇಕು 1-10 ನೇತರಗತಿ ಪ್ರವೇಶ ನಡೆಯಲಿದೆ ಎಂದರು.

ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಪೋಷಕರಿಂದ ಪಡೆಯಬೇಕು. ಆಗೊಮ್ಮೆ ಸಮಸ್ಯೆಯಾದರೆ ಡಿಡಿಪಿಐ ಬಿಇಓ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ.

Related