ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋಗೆ ಗ್ರೀನ್ ಸಿಗ್ನಲ್

ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋಗೆ ಗ್ರೀನ್ ಸಿಗ್ನಲ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಈ ಬಾರಿ ಏರ್ ಶೋಗೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ ನೀಡಿದ್ದು, ಈ ಬಾರಿ ದಸರಾದಲ್ಲಿ ಏರ್ ಶೋ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸ್ಪಂದಿಸಿದ್ದು, ಈ ಬಾರಿಯ ಮೈಸೂರು ದಸರಾದಲ್ಲಿಏರ್​​ ಶೋಗೆ ಕೇಂದ್ರ ಅನುಮತಿ ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ರಾಜೇಂದ್ರ ಅವರು ಇಂದು ಬನ್ನಿಮಂಟಪ ಮೈದಾನಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲದೇ ಮೈಸೂರು ಏರ್ ಬೇಸ್​ ಗ್ರೂಪ್ ಕ್ಯಾಪ್ಟನ್ ಡಿ.ಕೆ. ಹೋಜಾ ಅವರಿಗೆ ಚರ್ಚೆ ನಡೆಸಿದರು.

 

Related