ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಲು ಚಿಂತನೆ

ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಲು ಚಿಂತನೆ

ಶಿವಮೊಗ್ಗ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದ ಸ್ಮಾರ್ಟ್ ಕ್ಲಾಸ್ ಆರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದರು.

ಇಂದು ಶಿವಮೊಗ್ಗ ನಗರದ ಪಾರ್ಕ್ ಬಡಾವಣೆಯ ಸರ್ಕಾರಿ ಆಂಗ್ಲ ಮತ್ತು ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸ್ಮಾರ್ಟ್ ತರಗತಿಗಳನ್ನು ವೀಕ್ಷಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಳೆದ ವರ್ಷದ ಮಳೆಗಾಲದ ಅವಧಿಯಲ್ಲಿ ಹಾನಿಗೊಳಗಾಗಿದ್ದ ನಗರದ 87 ಶಾಲೆಗಳನ್ನು ದುರಸ್ತಿಗೆ ಒಳಪಡಿಸಲಾಗಿದೆ ಈಗಾಗಲೇ 7 0 ಶಾಲೆಗಳ ದುರಸ್ತಿ ಕಾರ್ಯ ಪೂರ್ಣಗೊಂಡಿದೆ ಎಂದರು

ಶಾಲೆಗಳಲ್ಲಿ 6.5 ಕೋಟಿ ರೂ ಗಳ ವೆಚ್ಚದಲ್ಲಿ 45 ಶಾಲೆಗಳಿಗೆ 460 ಕಂಪ್ಯೂಟರ್’, ಓವರ್ಹೆಡ್ ಪ್ರೋಜೆಕ್ಟರ್, ಲ್ಯಾಪ್ಟಾಪ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ನುಡಿದರು.

Related