ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್

ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1000 ಹೆಚ್ಚುವರಿ ಬಸಗಳ ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮಂಗಳವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ. ಬುಧ, ಗುರುವಾರಗಳಲ್ಲಿ ಹೆಚ್ಚುವರಿ ಬಸ್ಗಳು ಸಂಚರಿಸಾಲಿವೆ. ರಾಜ್ಯದ, ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬರುವ ಭಾನುವಾರದಂದು  ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಿದ್ದಾರೆ.

ಇ-ಟಿಕೇಟ್ ಬುಕಿಂಗ್‌ನ್ನು ksrtc.karnataka.gov.in  ವೆಬ್ ಸೈಟ್ ಮುಖಾಂತರ ಮಾಡಬಹುದು. ಪ್ರಯಾಣಿಕರು ಕರ್ನಾಟಕ, ಅಂತರರಾಜ್ಯದಲ್ಲಿ ಇರುವ 685 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ.5 ರಷ್ಟು, ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
• ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
• ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
• ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
• ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೆರಿ ಮುಂತಾದ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
• ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್ ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ. ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
• ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.
• ಕೋವಿಡ್-19 ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪ್ರಯಾಣಿಕರು ಪಾಲನೆ ಮಾಡುವುದು.

Related