ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಭೀಕರ ದಾಳಿಯಿಂದಾಗಿ ಇಡೀ ದೇಶವೇ ಬೆಚ್ಚಿಬಿದ್ದಿದ್ದು, ಇದೀಗ ಕರ್ನಾಟಕ ರಾಜ್ಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೊಲೆ ಮಾಡುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶವನ್ನು ಬಂದಿದೆ.
ಹೌದು, ಕಾಶ್ಮೀರ ದಾಳಿ ಇನ್ನೂ ಕೂಡ ಮಾಸಿಲ್ಲ ಆದರೆ ಕರ್ನಾಟಕ ರಾಜ್ಯದಲ್ಲಿ ಬೆದರಿಕೆ ಕರೆ ಒಂದು ಇಡೀ ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ.
ಸಿಎಂ- ಡಿಸಿಎಂ ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್ ಮತ್ತು ಟ್ರ್ಯಾಲಿ ಬ್ಯಾಗ್ಗೆ ತುಂಬುವುದಾಗಿ ಇ–ಮೇಲ್ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಸಂದೇಶ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇ–ಮೇಲ್ನಿಂದ ಈ ಬೆದರಿಕೆ ಸಂದೇಶ ಬಂದಿದೆ ಎಂಬುದು ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಬೆದರಿಕೆ ಇ–ಮೇಲ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರು, ನಗರ ಪೊಲೀಸ್ ಕಮಿಷನರ್ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಸಿಎಂ
ರಾಮಪುರ ಪ್ರಭಾಕರ್ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆತ ಇದುವರೆಗೂ ಸಾಲ ವಾಪಸ್ ಕೊಟ್ಟಿಲ್ಲ. ಪ್ರಭಾಕರ್ಗೆ ಬೇಗ ಸಾಲ ವಾಪಸ್ ಕೊಡೋಕೆ ಹೇಳಿ. ಆ ಪ್ರಭಾಕರ್ ಹಣವನ್ನು ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಇಟ್ಟಿದ್ದಾನೆ ಎಂದು ಬರೆಯಲಾಗಿದೆ. ಪ್ರಭಾಕರ್ ಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಒಬ್ಬ ಮಗನಿಗೆ ಮದುವೆ ಮಾಡಿದ್ದಾನೆ. ಸಾಲದ ಹಣವನ್ನು ವಾಪಸ್ ನೀಡಲು ಆತನಿಗೆ ಆದಾಯ ಮೂಲ ಇಲ್ಲ. ಹೀಗಾಗಿ ಪ್ರಭಾಕರ್ ನ ಕೊಲೆ ಮಾಡ್ತೀನಿ. ನೀವು ಹಣ ಕೊಡಿಸಿಲ್ಲ ಅಂದ್ರೆ ನಿಮ್ಮನ್ನು ಕೊಲೆ ಮಾಡ್ತೀನಿ ಅಂತ ಇಮೇಲ್ ಮಾಡಿದ್ದಾನೆ.
ಸದ್ಯ ಇ ಮೇಲ್ ಆಧರಿಸಿ ದೂರು ದಾಖಲಿಸಿರೋ ಪೊಲೀಸರು, ಎಫ್ ಐ ಆರ್ ದಾಖಲಿಸಿ ಸಿಂದಾರ್ ರಜಪೂತ್ ಗಾಗಿ ಹುಡುಕಾಟ ನಡೆಸಿದ್ದಾರೆ.
