ಗುಡುಗು ಸಹಿತ ಭಾರೀ ಮಳೆ

ಗುಡುಗು ಸಹಿತ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು , ಕರಾವಳಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉ. ಕ. ದ.ಕ. ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಭಾಗದಲ್ಲಿ ಇಂದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.

Related