ಸಿಲ್ಕಾನ್ ಸಿಟಿಯಲ್ಲಿ ನ್ಯೂ ಇಯರ್ ಸೆಲೆಬ್ರೇಶನ್ ಗೆ ಬಂತು ಟೈಟ್ ರೂಲ್ಸ್

ಸಿಲ್ಕಾನ್ ಸಿಟಿಯಲ್ಲಿ ನ್ಯೂ ಇಯರ್ ಸೆಲೆಬ್ರೇಶನ್ ಗೆ ಬಂತು ಟೈಟ್ ರೂಲ್ಸ್

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ಸೂಚನೆಗಳನ್ನು ನೀಡಿದ್ದಾರೆ.

ಹೌದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹೊಸ ವರ್ಷ ಆಚರಣೆಯನ್ನು ಅತಿ ವಿಜೃಂಭಣೆಯಿಂದ ಮಾಡಲಾಗುತ್ತಿದ್ದು, ಇನ್ನೂ ಬೆಂಗಳೂರಿನ ಮುಖ್ಯರಸ್ತೆಗಳಾದ ಎಂಜಿ ರೋಡ್, ಬ್ರಿಗೇಡ್ ರೋಡ್, ಸೇರಿದಂತೆ ಸುತ್ತಮುತ್ತಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಹೌದು, ಹೊಸ ವರ್ಷದ ಆಚರಣೆ ಹಿನ್ನೆಲೆ ಬೆಂಗಳೂರು ನಗರ ಪೊಲೀಸರು ಕೆಲವು ಮಾರ್ಗಸೂಚಿಗಳನ್ನು ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ನಗರ ಪೊಲೀಸ್ ಆಯುಕ್ತರು, ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ತೆಗೆದುಕೊಳ್ಳಲಾಗಿದೆ ಎಂದರು. ಜನಸಂದಣಿ ಜಾಗದಲ್ಲಿ ಬಂದೋಬಸ್ತ್ ಪಿಕೇಟಿಂಗ್ ಪಾಯಿಂಟ್ ಗಳ ನೇಮಿಸಲಾಗಿದೆ. ಸ್ಟಾರ್ ಹೋಟೆಲ್, ಪಬ್, ಕ್ಲಬ್​​ಗಳ ಏರಿಯಾದಲ್ಲೊ ಬಂದೋಬಸ್ತ್ ಪಾಯಿಂಟ್​ಗಳ ನಿಯೋಜನೆ ಮಾಡಲಾಗಿದೆ. ಬ್ರಿಗೇಡ್, ಎಂಜಿ ರಸ್ತೆಯಲ್ಲಿ 3 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದ್ದು, ಮಹಿಳೆಯರ ಸುರಕ್ಷತೆಗಾಗಿ ಸೇಫ್ ಟೀಂ ಐಲ್ಯಾಂಡ್​ಗಳ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಮಕ್ಕಳು ಕಾಣೆಯಾದರೆ ಕಳುವು ಬಗ್ಗೆ ಮಾಹಿತಿ ನೀಡಲು ಪೊಲೀಸ್ ಕಿಯೋಸ್ಕ್​ಗಳು ಇರಲಿವೆ. ಸೂಕ್ತ ಕಣ್ಗಾವಲು ಪ್ರದೇಶದಲ್ಲಿ ವಾಚ್ ಟವರ್ ಗಳ ನಿರ್ಮಾಣ, ಬೈನಾಕುಲರ್ ಮೂಲಕ ವೀಕ್ಷಣೆ ಮಾಡಲಾಗುತ್ತದೆ. ಉಳಿದಂತೆ ಇಂದಿರಾನಗರ ಹಾಗೂ ಕೋರಮಂಗಲದಲ್ಲೂ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಡ್ರಗ್ಸ್ ಪೆಡ್ಲರ್​​ಗಳ ಮೇಲೆ ಹದ್ದಿನ ಕಣ್ಣು

ಯಾವುದೇ ಕಾರಣಕ್ಕೂ ಡ್ರಗ್ಸ್ ಸೇವನೆ ಮಾಡೋಕೆ ಬಿಡಲ್ಲ. ಈಗಾಗಲೇ ಫೆಡ್ಲರ್ ಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಅನಧಿಕೃತವಾಗಿ ಮದ್ಯ ಶೇಖರಣೆ ಮಾಡೋದು, ಬ್ಲಾಕ್ ನಲ್ಲಿ ಮಾರಾಟ ಮಾಡುವರ ಮೇಲೆಯೂ ನಿಗಾ ಇರಿಸಲಾಗಿದೆ ಎಂದು ಎಚ್ಚರಿಕೆ ನೀಡಿದರು.

ಪ್ರಮುಖ ಸ್ಥಳದಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಬಳಕೆ ಮಾಡಲಾಗುತ್ತದೆ. ನಗರಾದ್ಯಂತ 10 ಸಾವಿರಕ್ಕೂ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಹೋಂ ಗಾರ್ಡ್​ಗಳನ್ನು ಸಹ ನಿಯೋಜನೆ ಮಾಡಲಾಗುತ್ತದೆ.

 

Related