ಯುಗಾದಿಗೆ “ಸಲಗ” ದರ್ಬಾರ್

ಯುಗಾದಿಗೆ “ಸಲಗ” ದರ್ಬಾರ್

ಬೆಂಗಳೂರು, ಫೆ. 26 : ದುನಿಯಾ ವಿಜಯ್ ಚೊಚ್ಚಲ ನಿರ್ದೇಶನದ “ಸಲಗ” ಚಿತ್ರದ ರಿಲೀಸಿಂಗ್ ಡೇಟ್ ಫಿಕ್ಸ್ ಆಗಿದೆ. ಚಿತ್ರ ಯುಗಾದಿ ಹಬ್ಬಕ್ಕೆ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ. ಮಾ.23ಕ್ಕೆ ಚಿತ್ರ ಬಿಡುಗಡೆ ಎಂದು ಹೇಳಲಾಗಿತ್ತಾದರೂ ಯುಗಾದಿ ಹಬ್ಬದ ಪ್ರಯುಕ್ತ ಮಾ. 27ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ತಯಾರಿ ನಡೆಸಿದೆ.
ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು ಸಂಗೀತ ನಿರ್ದೇಶಕ ಚರಣ್ ರಾಜ್ ರೀ ರೆಕಾರ್ಡಿಂಗ್ ಕೆಲಸದಲ್ಲಿ ತೊಡಗಿದ್ದಾರೆ.
“ಟಗರು” ಬಳಿಕ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಅವರ ಎರಡನೇ ಯೋಜನೆ ಇದಾಗಿದ್ದು ಚಿತ್ರದಲ್ಲಿ ಸಂಜನಾ ಆನಂದ್ ವಿಜಯ್ ಗೆ ಜೋಡಿಯಾಗಿ ಕಾಣಿಸಿಕೊಳ್ಲುತ್ತಿದ್ದಾರೆ.ಧನಂಜಯ್ ಪೋಲೀಸ್ ಪಾತ್ರದಲ್ಲಿ ಮಿಂಚಿದ್ದರೆ ಅಚ್ಯುತ್ ಕುಮಾರ್, ತ್ರಿವೇಣಿ ರಾವ್, ಮತ್ತು ಯಶ್ ಶೆಟ್ಟಿ ಸಹ ಮುಖ್ಯ ಭೂಮಿಕೆಯಲ್ಲಿದ್ದಾರೆ.

Related