ಸಿಲಿಕಾನ್ ಸಿಟಿಯಲ್ಲಿ ನಾಳೆ ಈ ಏರಿಯಾಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ

ಸಿಲಿಕಾನ್ ಸಿಟಿಯಲ್ಲಿ ನಾಳೆ ಈ ಏರಿಯಾಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆ ಅಂದರೆ ಭಾನುವಾರ ಹಲವಾರು ಏರಿಯಾಗಳಲ್ಲಿ ವಿದ್ಯುತ್ ಕಾರ್ಯ ನಡೆಯುತ್ತಿದ್ದು, ಇದಕ್ಕೆ ನಗರದ ಜನತೆ ಸಹಕಾರ ನೀಡಬೇಕೆಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ಈ ಏರಿಯಾದಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ, ಗಿಡನ ಕೋನೇನಹಳ್ಳಿ, ಉಪಕಾರ ಲೇಔಟ್ ಸೇರಿದಂತೆ ಬ್ಯಾಡರಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು. ಹಾಗೂ ಸುಂಕದಕಟ್ಟೆ, ಹೇರೋಹಳ್ಳಿ, ಕೆಂಪೇಗೌಡ ನಗರ, ಗೊಲ್ಲರಹಟ್ಟಿ, ತುಂಗಾನಗರ, ಹೊಸಳ್ಳಿ, ಅನ್ನಪೂರ್ಣೇಶ್ವರಿ ನಗರ, ಶಂಕ್ರಪ್ಪ ಕೈಗಾರಿಕಾ ಪ್ರದೇಶ, ಹೆಗ್ಗನಹಳ್ಳಿ, ಬಿಇಎಲ್ 2ನೇ ಹಂತ, ಅಂಜನಾನಗರದಲ್ಲಿ ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪವರ್ ಕಟ್ ಇರಲಿದೆ. ಹೀಗಾಗಿ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Related