ರೈಲು ಯೋಜನೆ ಅನುಷ್ಠಾನ

ರೈಲು ಯೋಜನೆ ಅನುಷ್ಠಾನ

ಬೆಳಗಾವಿ : ಬೆಳಗಾವಿ-ಧಾರವಾಡ ಮತ್ತು ಶಿವಮೊಗ್ಗ-ರಾಣೇಬೆನ್ನೂರ ಯೋಜನೆಗಳನ್ನು ಮುಂದಿನ ರೈಲ್ವೇಬಜೆಟ್‌ನಲ್ಲಿ ಅಳವಡಿಸಿಕೊಂಡು ಆದಷ್ಟು ಬೇಗನೆ ಕಾಮಗಾರಿಯನ್ನುಆರಂಭಿಸಲಾಗುವುದು ಎಂದು ರೈಲ್ವೇ ಇಲಾಖೆಯ ರಾಜ್ಯ ಸಚಿವರಾದ ಸುರೇಶ್‌ಅಂಗಡಿ ತಿಳಿಸಿದ್ದಾರೆ. ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್, ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ (ಮ್ಯೂಸಿಯಂ ಬಿಲ್ಡಿಂಗ್) ಹಾಗೂ ವಿಸ್ತರಣೆಗೊಂಡ ರೈಲ್ವೇ ಫ್ಲಾಟ್ ಫಾರ್ಮ್ ಇವುಗಳನ್ನು ಇಂದು ವರ್ಚುವಲ್ ವೇದಿಕೆಯ ಮೂಲಕ ತಮ್ಮ ಬೆಳಗಾವಿ ಕಚೇರಿಯಿಂದಲೇ ಉದ್ಘಾಟಿಸಿ ಮಾತನಾಡಿದರು.

994 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ-ರಾಣೇಬೆನ್ನೂರ ಹೊಸ ರೈಲು ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು ಉಚಿತವಾಗಿ ಭೂಮಿ ಒದಗಿಸುವುದರ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಶೇ.50 ರಷ್ಟು ಯೋಜನಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ. ಅದೇ ರೀತಿ ದಾವಣಗೆರೆ-ಬೆಂಗಳೂರು ನಡುವೆ ಡಬಲ್ ಲೈನ್ ನಿರ್ಮಾಣಕ್ಕೂ ಜಮೀನು ಒದಗಿಸುವುದಾಗಿ ತಿಳಿಸಿದ್ದಾರೆ.

Related