ಚಿಕಿತ್ಸೆ ಸಿಗದೆ ವ್ಯಕ್ತಿ ಸಾವು

  • In State
  • July 11, 2020
  • 417 Views
 ಚಿಕಿತ್ಸೆ ಸಿಗದೆ ವ್ಯಕ್ತಿ ಸಾವು

ವಿಜಯಪುರ : ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಪರದಾಡಿದ್ದ ರೋಗಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವಿಜಯಪುರದಲ್ಲಿ  ನಡೆದಿದೆ.

ಗುರುವಾರ ತಡರಾತ್ರಿ  ನಗರಕ್ಕೆ ಬಂದಿದ್ದ ಸಂಬಂಧಿಕರು ನಾನಾ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಬೆಳಿಗ್ಗೆ ರೋಗಿಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದರು.  ಜಿಲ್ಲಾಧಿಕಾರಿಗಳು ರೋಗಿಯನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ರೋಗಿ  ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ.

Related