ಜನಮನ ಸೆಳೆದ ತಿರಂಗ ರಾಗ

     ಬೊಮ್ಮನಹಳ್ಳಿ ; 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಬೊಮ್ಮನಹಳ್ಳಿಯ ಹೆಚ್‌ಎಸ್‌ಆರ್ ಬಡಾವಣೆಯಲ್ಲಿ ನಡೆದ ‘ತಿರಂಗ ರಾಗ’ ಕಾರ್ಯಕ್ರಮ ಜನಮನ ಸೆಳೆಯಿತು.

    ಎರಡು ಸಾವಿರ ಅಡಿ ಉದ್ದದ ರಾಷ್ಟ್ರಧ್ವಜದೊಂದಿಗೆ ಸಾಗಿದ ಶಾಲಾ ಮಕ್ಕಳ ಪಥಸಂಚಲನ ರಾಷ್ಟ್ರಪ್ರೇಮವನ್ನು ಉದ್ದೀಪನಗೊಳಿಸಿತು. ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ‘ದೇಶಕ್ಕಾಗಿ ಪ್ರಾಣದ ಹಂಗು ತೊರೆದು ಸೇನೆಯಲ್ಲಿ ದುಡಿದ ನಿವೃತ್ತ ಸೈನಿಕರನ್ನು ಸನ್ಮಾನಿಸಿರುವುದು ಅತ್ಯಂತ ಹೆಮ್ಮೆಯ ವಿಚಾರ. ದೇಶದ ಸ್ವಾತಂತ್ರ್ಯಕ್ಕಾಗಿ ಭಗತ್ ಸಿಂಗ್ ಸೇರಿದಂತೆ ಲಕ್ಷಾಂತರ ಜನ ಬಲಿದಾನ ಮಾಡಿದ್ದಾರೆ. ಅವರೆಲ್ಲರನ್ನೂ ಸ್ಮರಿಸುವುದು ನಮ್ಮ ಕರ್ತವ್ಯ’ ಎಂದರು.

    ಶಾಸಕ ಸತೀಶ್ ರೆಡ್ಡಿ ಮಾತನಾಡಿ ‘ ಸ್ವಾತಂತ್ರೋತ್ಸವದ ಆಶಯಗಳ ಸಾಕಾರಕ್ಕಾಗಿ ಪ್ರತಿಯೊಬ್ಬ ಪ್ರಜೆಯೂ ದುಡಿಯಬೇಕು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಮ್ಮ ಕ್ಷೇತ್ರಕ್ಕೆ ಐದುನೂರು ಕೋಟಿ  ರೂಪಾಯಿ ನೀಡಿದ್ದಾರೆ. ಎಲ್ಲರಿಗೂ ನಾಗರಿಕ ಸೌಲಭ್ಯಗಳು ದೊರಕುವಂತೆ ಮಾಡಲು ಪ್ರಯತ್ನಿಸಲಾಗುತ್ತಿದೆ’ ಎಂದರು.

    ಪರಿಸರ ತಜ್ಞ ಯಲ್ಲಪ್ಪರೆಡ್ಡಿ ಹಾಗು ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಗಾಯಕ ರಘುಧೀಕ್ಷಿತ್ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಸಿಕೊಟ್ಟರು. ನಾಯಕ ನಟ ದರ್ಶನ್ಕಾ ರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Related