ಬೆಂಗಳೂರು: ಭಾರತ ಬಿಟ್ಟು ತೊಲಗಿ” ಚಳುವಳಿಯು ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು. 8 ಆಗಸ್ಟ್ ರಂದು ಮುಂಬಯಿಯ ಗೊವಾಳಿಯದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಘೋಷಣೆಯೊಂದಿಗೆ ಆಗಸ್ಟ್ 1942 ರಲ್ಲಿ ಪ್ರಾರಂಭವಾಯಿತು.
ಅಂದಿನಿಂದ ಇಂದಿನವರೆಗೂ ಭಾರತ ಬಿಟ್ಟು ತೊಲಗಿ ಚಳುವಳಿಯನ್ನು ದೇಶದಲ್ಲಿ ಆಚರಿಸಲಾಗುತ್ತಿದೆ. ಅದರಂತೆ ಇಂದು (ಶನಿವಾರ ಆ. 09) ರಂದು ಬಿಬಿಎಂಪಿಯಲ್ಲಿ ಭಾರತ ಬಿಟ್ಟು ತೊಲಗಿ ಚಳುವಳಿ ಅಂಗವಾಗಿ ಮಾನ್ಯ ಆಡಳಿತಗಾರರಾದ ತುಷಾರ್ ಗಿರಿ ನಾಥ್, ರವರು, ಮಾನ್ಯ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ಶ್ರೀಮತಿ ದೀಪಿಕಾ ಶ್ರೀಕಾಂತ್ ರವರಿಂದ ವೈಷ್ಣವ ಜನತೋ, ಹಡ್ಸನ್ ಚರ್ಚಿನ ಫಾದರ್ ಶ್ರೀ ರೆವೆರೆಂಡ್ ಆಲ್ಫ್ರೆಡ್ ಸುದರ್ಶನ್ ಮತ್ತು ತಂಡದಿಂದ ಬೈಬಲ್ ವಾಚನ, ಗುರುದ್ವಾರದ ಶ್ರೀ ಗುರುಸಿಂಗ್ ಸಭಾ ಮತ್ತು ತಂಡದವರಿಂದ ಗುರು ಗ್ರಂಥ ವಾಚನ, ಮೌಲ್ವಿ ಹಫೀಜ್ ಶಾಬೀರ್ ಹುಸೇನ್ ರವರಿಂದ ಖುರಾನಿನ ವಾಚನ ಮಾಡಲಾಯಿತು. ಇದನ್ನೂ ಓದಿ: ಸಿಲಿಕಾನ್ ಸಿಟಿಗೆ ನಾಳೆ ಮೋದಿ ಆಗಮನ
ಈ ವೇಳೆ ವಿಶೇಷ ಆಯುಕ್ತರಾದ ನವೀನ್ ಕುಮಾರ್ ರಾಜು, ಉಪ ಆಯುಕ್ತರಾದ ಅಮರೇಶ್, ಪೂರ್ವ ವಲಯ ಜಂಟಿ ಆಯುಕ್ತರಾದ ಸರೋಜಾ, ಮಾಜಿ ಸಚಿವರಾದ ರಾಮಚಂದ್ರೇಗೌಡ, ಮಾಜಿ ಮಹಾಪೌರರಾದ ಜೆ. ಹುಚ್ಚಪ್ಪ, ಎಂ.ರಾಮಚಂದ್ರಪ್ಪ ಸೇರಿದಂತೆ ಮತ್ತಿತರರು
