ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು

ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು

ಹಾವೇರಿ : ಜಿಲ್ಲೆಯಲ್ಲಿ ಈ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಫೇಲ್ ದ ಹಿನ್ನಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹಾವೇರಿಯ ದ್ಯಾಮವ್ವನಗುಡಿ ಓಣಿಯ ವೈಷ್ಣವಿ ರಿತ್ತಿ (16) ಎಂಬ ವಿದ್ಯಾರ್ಥಿನಿ ಗಣಿತ ವಿಷಯದಲ್ಲಿ ಫೇಲ್ ಕಾರಣ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅದೇ ರೀತಿ ಬ್ಯಾಡಗಿ ತಾಲ್ಲೂಕಿನ ಕಾಶಂಬಿ ಗ್ರಾಮದ ಭಾರತಿ ಕೋಟಿ (16) ಎಂಬ ವಿದ್ಯರ್ಥಿನಿ ಕಡಿಮೆ ಅಂಕ ಅಂದರೆ ಶೇ 61.6ರಷ್ಟು ಬಂದಿವೆ ಎಂಬ ಕಾರಣದಿಂದ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

Related