ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಣೆ

ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಣೆ

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿರುವ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಗೂ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿ ಅವರ ಬದುಕಿಗೆ ಶಕ್ತಿಯನ್ನು ತುಂಬುವ, ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಬದುಕನ್ನು ನಿರಾಳ ಮಾಡುವ ಅವಶ್ಯಕತೆ ಇದೆ. ಅವರು ಮಾಡುತ್ತಿರುವ ಕೆಲಸ ಅತ್ಯಂತ ಪ್ರಮುಖ ಕೆಲಸ. ನಾವು ಸೃಷ್ಟಿ ಮಾಡುವ ಕಸವನ್ನು ಪ್ರತಿನಿತ್ಯ ನಿರಂತರವಾಗಿ ದಣಿವಿಲ್ಲದೆ ಮಾಡುತ್ತಿದ್ದಾರೆ. ಆ ಕಾಯಕವನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮ ಇದಾಗಿದೆ ಎಂದರು.

ಈ ಉತ್ತಮ ಕೆಲಸ ಮಾಡಿದ ನಿಗಮದ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು. ವಿದೇಶದಲ್ಲಿ ಕರ್ಮಚಾರಿಗಳು ಕಾರುಗಳಲ್ಲಿ ಓಡಾಡುವುದನ್ನು ಕೇಳಿದ್ದೆವು. ಈಗ ಇದು ನಮ್ಮ ದೇಶದಲ್ಲಿಯೂ ಆಗುತ್ತಿದೆ. ಈಗ ಸ್ಕೂಟರ್ ನಲ್ಲಿ ಓಡಾಡುವಂತಾಗಿದ್ದು, ಬರುವ ದಿನಗಳಲ್ಲಿ ಅವರಿಗೆ ಕಾರುಗಳನ್ನು ಒದಾಗಿಸುವಂತಾಗುವ ವಿಶ್ವಾಸವಿದೆ ಎಂದರು.

Related