ಎರಡು ವರ್ಷಗಳ ಸಾಧನೆ ಪುಸ್ತಕ ಬಿಡುಗಡೆ

ಎರಡು ವರ್ಷಗಳ ಸಾಧನೆ ಪುಸ್ತಕ ಬಿಡುಗಡೆ

ಔರಾದ್ : ಪಶು ಸಂಗೋಪನೆ, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಪಶು ಸಂಗೋಪನೆ ಇಲಾಖೆಯಲ್ಲದ ಪ್ರಗತಿ ಕಾರ್ಯ, ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿಯುಳ್ಳ ‘ಎರಡು ವರ್ಷಗಳ ಸಾಧನೆ’ ಎಂಬ ಪುಸ್ತಕವನ್ನು ಶನಿವಾರ ತಾಲ್ಲೂಕಿನ ವಡಗಾಂವ್‌ನಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ ಮಾತನಾಡಿ, ಪ್ರಭು ಚವ್ಹಾಣ್ ಅವರು ಪಶು ಸಂಗೋಪನೆ ಇಲಾಖೆಯ ಸಚಿವರಾದ ನಂತರ ರಾಜ್ಯದಲ್ಲಿ ಐತಿಹಾಸಿಕ ಯೋಜನೆಗಳನ್ನು ಜಾರಿಗೆ ತಂದು, ಮೂಕ ಪ್ರಾಣಿಗಳ ಪಾಲಿಗೆ ಪ್ರಭುವಾಗಿ ಪರಿಣಮಿಸಿದ್ದಾರೆ. ಪ್ರಾಣಿಗಳ ಸಂರಕ್ಷಣೆಗಾಗಿ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆ, ಅಕ್ರಮ ಗೋವುಗಳ ಸಾಗಾಣಿಕೆ, ಗೋಹತ್ಯೆ ನಿಷೇಧ ಕಾಯ್ದೆ, ಮನುಷ್ಯರಂತೆ ಪ್ರಾಣಿಗಳಿಗೂ ಆರೋಗ್ಯ ಸೇವೆ ಸಿಗಬೇಕೆಂಬ ಉದ್ದೇಶದಿಂದ ಪಶು ಸಂಜೀವಿನಿ ಆಂಬುಲೆನ್ಸ್ ಯೋಜನೆ ಜಾರಿ, ಎರಡು ವರ್ಷಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಪುಸ್ತಕ ರೂಪದಲ್ಲಿ ದಾಖಲಿಸಿರುವುದು ಉತ್ತಮ ಬೆಳವಣಿಗೆ. ಭವಿಷ್ಯದ ದಿನಗಳಲ್ಲಿ ಈ ಪುಸ್ತಕ ಎಲ್ಲರ ಉಪಯೋಗಕ್ಕೆ ಬರಲಿದೆ ಎಂದರು.
ಸಚಿವ ಪ್ರಭು ಚವ್ಹಾಣ್ ಮಾತನಾಡಿ, ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉತ್ತಮ ಕೆಲಸಗಳಾಗಿವೆ. ಅಭಿಲಾಶೆಯಂತೆ ನನಗೆ ಪಶು ಸಂಗೋಪನಾ ಇಲಾಖೆಯ ಖಾತೆ ಸಿಕ್ಕಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಜಾನುವಾರುಗಳ ಸಂರಕ್ಷಣೆಗೆ ಏನೇನು ಮಾಡಬೇಕು ಎಂಬುದನ್ನು ಅಧ್ಯಯನ ಮಾಡಿದ್ದೇನೆ. ಅದರಂತೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರುತ್ತಿದ್ದೇನೆ. ರಾಜ್ಯದಲ್ಲಿ ಜಾರಿಗೆ ತಂದಿರುವ ಪಶು ಸಂಜೀವಿನಿ ಯೋಜನೆ ಯಶಸ್ವಿಯಾಗಿರುವುದನ್ನು ಮನಗಂಡು ಕೇಂದ್ರ ಸರ್ಕಾರವು ಈ ಯೋಜನೆಯನ್ನು ಮಾದರಿಯಾಗಿಸಿಕೊಂಡು ದೇಶದ 14 ರಾಜ್ಯಗಳಲ್ಲಿ ಯೋಜನೆ ಜಾರಿಗೊಳಿಸಲು ಮುಂದಾಗಿದೆ. 275 ಹೊಸ ಆಂಬ್ಯುಲೆನ್ಸ್ಗಳನ್ನು ಮಂಜೂರಾತಿ ನೀಡಿರುವುದು ಹೆಮ್ಮೆಯ ಸಂಗತಿ ಎಂದರು.
ಪಕ್ಷದ ಮುಖಂಡರು ಜಿಲ್ಲೆಯ ಎಲ್ಲ ಪದಾಧಿಕಾರಿಗಳಿಗೆ ಎರಡು ವರ್ಷಗಳ ಸಾಧನೆ ಪುಸ್ತಕಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ವಿಧಾನ ಪರಿಷತ್ ಸದಸ್ಯ ರಘುನಾಥರಾವ ಮಲ್ಕಾಪುರೆ, ಕೆ.ಎಸ್.ಐ.ಐ.ಡಿ.ಸಿ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ಹಜ್ ಕಮಿಟಿ ಅಧ್ಯಕ್ಷ ರೌಫುದ್ದಿನ್ ಕಛೇರಿವಾಲೆ, ಬುಡಾ ಅಧ್ಯಕ್ಷ ಬಾಬು ವಾಲಿ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಬಿಜೆಪಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಮುಖಂಡರಾದ ಗುರುನಾಥ ಜ್ಯಾಂತಿಕರ ಪಕ್ಷದ ಮುಖಂಡರು, ಪದಾಧಿಕಾರಿಗಳು ಇದ್ದರು.

Related