ಉಡುಪಿ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆ ಚುರುಕು

ಉಡುಪಿ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆ ಚುರುಕು

ಉಡುಪಿ: ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿದ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್, ಬಳಿಕ ಹೇಳಿದ್ದಿಷ್ಟುಉಡುಪಿಯ ಅಂಬಲಪಾಡಿಯಲ್ಲಿರುವ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಸಿದ್ದಾರೆ. ಈ ಸಂಬಂಧ ಖುದ್ದು ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿಗೆ ಭೇಟಿ ನೀಡಿ ವಿಡಿಯೋ ಚಿತ್ರೀಕರಣದ ಸ್ಥಳ ಪರಿಶೀಲಿಸಿದರು.

ರಾಜ್ಯದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿರುವ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ಇದೀಗ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಇಂದು ಉಡುಪಿಯ ಅಂಬಲಪಾಡಿಯಲ್ಲಿರುವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಡುಪಿ ಎಸ್ಪಿಯಿಂದ ಮಾಹಿತಿ ಪಡೆದು ನಂತರ ಕಾಲೇಜಿಗೆ ಭೇಟಿ ನೀಡಿದ ಮನೀಶ್ ಕರ್ಬೀಕರ್, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿ ಬಳಿಕ ಕಾಲೇಜು ಆಡಳಿತಾಧಿಕಾರಿಯಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯಲ್ಲಿ ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಉಡುಪಿ ಪೊಲೀಸರು ನಡೆಸಿದ ತನಿಖೆ ರಿಪೋರ್ಟ್ ಪಡೆದುಕೊಳ್ಳಲಾಗಿದೆ. ಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದು, ಮುಂದೆ ಏನೇನು ತನಿಖಾ ಪ್ರಕ್ರಿಯೆ ನಡೆಸಬೇಕು ಈ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

 

Related