ಹೊಸ ಇತಿಹಾಸ ಬರೆದ ಉಮೇಶ್ ಯಾದವ್

ಹೊಸ ಇತಿಹಾಸ ಬರೆದ ಉಮೇಶ್ ಯಾದವ್

ಈ ಬಾರಿ ನಡೆಯುತ್ತಿರುವ ಐಪಿಎಲ್ ಪಂದ್ಯಾವಳಿಯಲ್ಲಿ ಉಮೇಶ್ ಯಾದವರು ಹೊಸ ದಾಖಲೆಯನ್ನು ಬರೆದಿದ್ದಾರೆ.

ಹೌದು, ನಿನ್ನೆ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಉಮೇಶ್ ಯಾದವಾರು ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದ ಉಮೇಶ್ ಅವರು ಮೂರು ಓವರ್ ಗಳಲ್ಲಿ ಸುಮಾರು 35 ರನ್ ನೀಡಿ ಒಂದು ವಿಕೆಟ್ ಪಡೆದಿದ್ದರು.

ಈ ವಿಕೆಟ್ ನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಉಮೇಶ್ ಯಾದವ್ ಅವರು ಒಂದೇ ತಂಡದ ಪರವಾಗಿ ಅತ್ಯಧಿಕ ವಿಕೆಟ್ ಕಬಳಿಸಿ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.

ಇನ್ನು ಐಪಿಎಲ್​ನಲ್ಲಿ ಇದುವರೆಗೆ 145 ಪಂದ್ಯಗಳನ್ನಾಡಿರುವ ಉಮೇಶ್ ಯಾದವ್ ಒಟ್ಟು 2990 ಎಸೆತಗಳನ್ನು ಎಸೆದಿದ್ದು, ಈ ವೇಳೆ 4228 ರನ್​ಗಳನ್ನು ನೀಡಿ 140 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಐಪಿಎಲ್​ ವಿಕೆಟ್ ಸರದಾರರ ಪಟ್ಟಿಯಲ್ಲಿ 13ನೇ ಸ್ಥಾನ ಅಲಂಕರಿಸಿದ್ದಾರೆ.

Related