“ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ರವರ ಭಾವಚಿತ್ರ ಅನಾವರಣ

“ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ರವರ ಭಾವಚಿತ್ರ ಅನಾವರಣ

ಬೆಂಗಳೂರು: ಇಂದಿನಿಂದ ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಸರಕಾರಿ ಕಚೇರಿಗಳಲ್ಲಿ ವಿಶ್ವಗುರು ಬಸವಣ್ಣನವರ ಫೋಟೋವನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಅದರ ಬೆನ್ನಲ್ಲೇ ಇಂದು (ಫೆ.17 ಶನಿವಾರ) ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇಂದಿನಿಂದ ವಿಶ್ವಗುರು ಬಸವಣ್ಣ ಅವರ ಫೋಟೋವನ್ನು ಕಡ್ಡಾಯವಾಗಿ ಅಳವಡಿಸುತ್ತಿದ್ದಾರೆ.

ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ “ಕರ್ನಾಟಕ ಸಾಂಸ್ಕೃತಿಕ ನಾಯಕ”ರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರಗಳಲ್ಲಿ “ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂಬ ಅಡಿಬರಹವಿರುವ ಭಾವಚಿತ್ರವನ್ನು ಬಿಬಿಎಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಶಿವಾನಂದ ಕಲ್ಕೆರೆ, ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರಾದ ಪ್ರತಿಭಾ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಲಕ್ಷ್ಮಿದೇವಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.

Related